ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ: ಶಾಲಾ-ಕಾಲೇಜುಗಳಿಗೆ ರಜೆ

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತನ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿ ಮಾಡಲಾಗಿದೆ.

ಇನ್ನು ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಿಂದ ನಗರದಲ್ಲಿ ಪ್ರಕ್ಷುಬ್ಧ ವಾತಾವರಣವಿರುವ ಕಾರಣ ಮುಂಜಾಗ್ರತಾ ಇಂದು ರಾತ್ರಿಯಿಂದ ನಾಡಿದ್ದು ಬೆಳಗ್ಗೆ ಆರು ಗಂಟೆವರೆಗೆ ಸೆಕ್ಷನ್ 144 ಜಾರಿಯಲ್ಲಿ ಇರಲಿದೆ ಎಂದು ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.

ನಾಳೆ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಅವಕಾಶವಿಲ್ಲ ಎಂದಿರುವ ಅವರು, ಅಗತ್ಯ ಬಿದ್ದರೆ ನಿಷೇಧಾಜ್ಞೆ ಮುಂದುವರಿಸುವುದಾಗಿಯೂ ಹೇಳಿದ್ದಾರೆ.

ಶಾಲಾ-ಕಾಲೇಜುಗಳಿಗೆ ರಜೆ: ಶಿವಮೊಗ್ಗ ನಗರದ ಕೆಲ ಭಾಗದಲ್ಲಿ ಕಲ್ಲು ತೂರಾಟ ಆರಂಭವಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Edited By : Nirmala Aralikatti
PublicNext

PublicNext

21/02/2022 09:56 pm

Cinque Terre

135.19 K

Cinque Terre

14

ಸಂಬಂಧಿತ ಸುದ್ದಿ