ಬೆಳಗಾವಿ: ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಕಿರಿಯ ಸಹಾಯಕರ ಪರೀಕ್ಷೆಯಲ್ಲಿ ಸ್ಮಾರ್ಟ್ ವಾಚ್ ಬಳಸಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹೌದು, ಕಳೆದ ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಗೋಕಾಕ್ ನ ಜಿಎಸ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಯಿಂದ ಸ್ಮಾರ್ಟ್ ವಾಚ್ ಬಳಸಿ ಅಕ್ರಮ ಎಸಗಿದ ಆರೋಪದಡಿ ಸಿದ್ದಪ್ಪ ಮದಿಹಳ್ಳಿ ಎಂಬ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿ ಸಿದ್ದಪ್ಪ ಮದಿಹಳ್ಳಿ ಸ್ಮಾರ್ಟ್ ವಾಚ್ ನಲ್ಲಿ ಪ್ರಶ್ನೆ ಪತ್ರಿಕೆ ಫೋಟೊ ತೆಗೆದು ಟೆಲಿಗ್ರಾಂ ಆ್ಯಪ್ ಮೂಲಕ ಮತ್ತೊಬ್ಬ ಆರೋಪಿ ಸುನಿಲ್ ಭಂಗಿ ಎಂಬಾತನಿಗೆ ರವಾನಿಸಿದ್ದ.
ಈ ಬಗ್ಗೆ ದೂರು ದಾಖಲಿಸಿಕೊಂಡ ಪೊಲೀಸರು ಮೊದಲು ಸಿದ್ದಪ್ಪನನ್ನು ಬಂಧಿಸಿ, ಬಳಿಕ ತೀವ್ರ ವಿಚಾರಣೆ ಬಳಿಕ ಸುನಿಲ್ ಭಂಗಿ
ಮನೆಯಲ್ಲಿ ಕುಳಿತು ಬ್ಲೂಟೂತ್ ನಲ್ಲಿ ಹಲವರಿಗೆ ಉತ್ತರ ಹೇಳಿದ್ದಾನೆ. ಜೊತೆಗೆ ಗದಗ ನಗರಸಭೆ ಪಿ.ಯು. ಕಾಲೇಜಿನ ಕೇಂದ್ರದಿಂದಲೂ ಪ್ರಶ್ನೆ ಪತ್ರಿಕೆ ಲಭ್ಯವಾಗಿತ್ತು.
ಆ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿದ್ದ ಗದಗ ಮೂಲದ ಮಾರುತಿ ಸೋನಾವಣೆ, ಸಮಿತ್ ಕುಮಾರ್ ಸೋನಾವಣೆ ಎಂಬ ತಂದೆ- ಮಗನನ್ನು ಬಂಧಿಸಿ ಬೆಳಗಾವಿಗೆ ಕರೆತಂದು ವಿಚಾರಣೆ ನಡೆಸಿ, ಬಳಿಕ 10 ಮಂದಿ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
PublicNext
23/08/2022 02:29 pm