ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ ನಗರದಲ್ಲಿ ಮಾ.4ರವರೆಗೆ ನಿಷೇಧಾಜ್ಞೆ ವಿಸ್ತರಣೆ

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಬಳಿಕ ಶಿವಮೊಗ್ಗ ನಗರದಲ್ಲಿ ಉದ್ವಿಗ್ನಗೊಂಡ ಪರಿಸ್ಥಿತಿ ನಿಯಂತ್ರಿಸಲು 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಸದ್ಯ ಈ ನಿಷೇಧಾಜ್ಞೆಯನ್ನು ಮಾ.4ರವರೆಗೆ ವಿಸ್ತರಿಸಲಾಗಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸುವ ಸಂಬಂಧ 144 ಸೆಕ್ಷನ್ ಅಡಿಯಲ್ಲಿ ಜಾರಿಗೊಳಿಸಿರುವ ನಿಷೇಧಾಜ್ಞೆಯನ್ನು ಮಾರ್ಚ್ 4 ರವರೆಗೆ ವಿಸ್ತರಿಸಲಾಗಿದೆ. ಆದರೆ ಶಿವಮೊಗ್ಗ ನಗರದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಈ ಸಮಯದಲ್ಲಿ ವ್ಯಾಪಾರ, ವಹಿವಾಟು ಮಾಡಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾತ್ರಿ 7 ಗಂಟೆ ಬಳಿಕ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು. ಫೆ. 28 ರಿಂದ ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜುಗಳು ಪುನಾರಂಭವಾಗಲಿದೆ.

Edited By : Nagaraj Tulugeri
PublicNext

PublicNext

28/02/2022 08:08 am

Cinque Terre

68.02 K

Cinque Terre

0