ಮೈಸೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನಡೆದಿದ್ದ ಬಟ್ಟೆ ಬ್ಯಾಗ್ ಖರೀದಿ ಹಗರಣದ ತನಿಖೆಗೆ ಕರ್ನಾಟಕ ಸರ್ಕಾರ ಆದೇಶಿಸಿದೆ. ನಗರಸಭೆ, ಪುರಸಭೆ ಮತ್ತು ಮಹಾನಗರಪಾಲಿಕೆಗಳ ಪೂರ್ವಾನುಮತಿಯಿಲ್ಲದೆ ದುಬಾರಿ ಬೆಲೆಗೆ ಬ್ಯಾಗ್ ಗಳನ್ನು ಖರೀದಿಸಲಾಗಿತ್ತು ಎಂದು ಶಾಸಕ ಸಾ.ರಾ.ಮಹೇಶ್ ಈ ಹಗರಣವನ್ನು ಬಯಲಿಗೆ ಎಳೆದಿದ್ದರು.
₹ 10ರಿಂದ ₹ 13ಕ್ಕೆ ಸಿಗುವ ಬ್ಯಾಗ್ ಗಳನ್ನು ಡಿಸಿ ₹ 52 ನೀಡಿ ಖರೀದಿಸಿದ್ದರು. 14.71 ಲಕ್ಷ ಬಟ್ಟೆ ಬ್ಯಾಗ್ ಗಳನ್ನು ₹ 14 ಕೋಟಿ ಮೊತ್ತಕ್ಕೆ ಖರೀದಿಸಿದ್ದರು. ಈ ಹಗರಣದಲ್ಲಿ ₹ 6.18 ಕೋಟಿ ಅವ್ಯವಹಾರ ನಡೆದಿದೆ ಎನ್ನುವ ಆರೋಪವಿದೆ.
PublicNext
23/03/2022 10:39 pm