ಬೆಂಗಳೂರು: ಕರಾವಳಿಯಲ್ಲಿ ನಡೆದ ಸರಣಿ ಕೊಲೆಗಳು ಹಾಗೂ ಗಲಭೆಗಳ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಇದರ ನಡುವೆ ಕೊಲೆಯನ್ನು ಸಮರ್ಥಿಸುವ ಮತ್ತು ಪ್ರಚೋದಿಸುವ ಹೇಳಿಕೆ ನೀಡಿದ್ದ ಕಾಳಿ ಮಠದ ಋಷಿಕುಮಾರ ಸ್ವಾಮೀಜಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ತನಿಖೆಯ ಉಸ್ತುವಾರಿ ವಹಿಸಿಕೊಂಡಿರುವ ಎಡಿಜಿಪಿ ಅಲೋಕ್‌ಕುಮಾರ್ ಹೇಳಿದ್ದಾರೆ. ಜತೆಗೆ ಸಾಮಾಜಿಕ ಜಾಲತಾಣಗಳ ದ್ವೇಷ ಹರಡುವವರ ಮೇಲೆ ಬಿಗಿ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೆಲವರು ಪ್ರಚೋದನಕಾರಿಯಾಗಿ ಪೋಸ್ಟ್ ಹಾಕುತ್ತಿರುವುದು ಕಂಡು ಬಂದಿದೆ. ಅಂತವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಶಾಂತಿ ಸಭೆಯಲ್ಲಿ ಈ ಬಗ್ಗೆ ಅನೇಕರಿಂದ ಆಕ್ರೋಶ ಕೇಳಿ ಬಂದಿದೆ. ಹೀಗಾಗಿ ಇದೆಲ್ಲದಕ್ಕೂ ನಾವು ಮೂಗುದಾಣ ಹಾಕಲಿದ್ದೇವೆ ಎಂದು ಅಲೋಕ್‌ಕುಮಾರ್ ಹೇಳಿದ್ದಾರೆ.
PublicNext
31/07/2022 08:13 pm