ಶಿವಮೊಗ್ಗ: ನಿನ್ನೆ ಸೋಮವಾರ ಸ್ವಾತಂತ್ರ್ಯೋತ್ಸವ ದಿನದಂದು ಕೆಲ ಕಿಡಿಗೇಡಿಗಳು ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಿದ್ದರು. ಈ ವೇಳೆ ಕೆಲ ಹೊತ್ತು ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು.
ಈ ಹಿನ್ನೆಲೆಯಲ್ಲಿ ಇಡೀ ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಈಗಾಗಲೇ ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಬೈಕ್‌ನ ಹಿಂಬದಿಯಲ್ಲಿ ಸಂಚರಿಸುವಂತಿಲ್ಲ ಎಂದು ಆದೇಶಿಸಲಾಗಿದೆ. ಈ ನಡುವೆ ಪೊಲೀಸರು ನಗರದಲ್ಲಿ ರೂಟ್ ಮಾರ್ಚ್ ನಡೆಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ಬಲದೊಂದಿಗೆ ರೂಟ್ ಮಾರ್ಚ್ ನಡೆಸಿದ ಪೊಲೀಸರು ಕಿಡಿಗೇಡಿಗಳಿಗೆ ನಡುಕ ಹುಟ್ಟಿಸಿದ್ದಾರೆ.
PublicNext
16/08/2022 10:27 pm