ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿರುವ ರೇಜರ್ ಪೇ, ಪೇಟಿಎಂ, ಕ್ಯಾಶ್‌ಫ್ರೀಗೆ ಸಂಬಂಸಿದ ಆರು ಸ್ಥಳಗಳಲ್ಲಿ ದಾಳಿ ನಡೆಸಿರುವ ಜಾರಿ ನಿರ್ದೆಶನಾಲಯ (ಇಡಿ) ಶೋಧ ಕಾರ್ಯ ಮುಂದುವರೆಸಿದೆ.
ದಾಳಿ ಸಂಧರ್ಭದಲ್ಲಿ ಸಂಸ್ಥೆಯು ಚೀನಿ ವ್ಯಕ್ತಿಗಳು ನಿಯಂತ್ರಿಸಲ್ಪಡುತ್ತಿದ್ದ ಈ ಘಟಕಗಳ ವ್ಯಾಪಾರಿ ಐಡಿಗಳು ಮತ್ತು ಬ್ಯಾಂಕ್ ಖಾತೆಗಳಲ್ಲಿ ಇರಿಸಲಾಗಿದ್ದ 17 ಕೋಟಿ ಹಣವನ್ನು ಜಪ್ತಿ ಮಾಡಲಾಗಿದೆ. ಇನ್ನೂ, ದುಷ್ಕರ್ಮಿಗಳು ಭಾರತೀಯರ ನಕಲಿ ದಾಖಲೆಗಳನ್ನು ಬಳಸುತ್ತಾರೆ ಮತ್ತು ಅವರನ್ನು ಅಪಾರ ಆದಾಯ ಗಳಿಕೆಗೆ ನಕಲಿ ನಿರ್ದೇಶಕರನ್ನಾಗಿ ಮಾಡುತ್ತಾರೆ. ಆದರೆ, ಈ ಘಟಕಗಳು ಚೀನೀ ವ್ಯಕ್ತಿಗಳಿಂದ ನಿಯಂತ್ರಿಸಲ್ಪಡುತ್ತವೆ ಎನ್ನುವ ಮಾಹಿತಿ ಗೊತ್ತಾಗಿದೆ ಎಂದು ಇಡಿ ತಿಳಿಸಿದೆ.
ರೇಜರ್ ಪೇ ಪ್ರೈ ಲಿ, ಕ್ಯಾಶ್‌ಫ್ರೀ ಪೇಮೆಂಟ್ಸ್, ಪೇಟಿಎಂ ಪೇಮೆಂಟ್ ಸರ್ವಿಸಸ್ ಲಿ ಮತ್ತು ಚೀನಾದ ವ್ಯಕ್ತಿಗಳಿಂದ ನಿಯಂತ್ರಿಸಲ್ಪಡುತ್ತಿರುವ ಘಟಕಗಳು ಶೋಧ ಕಾರ್ಯಾಚರಣೆಯಲ್ಲಿ ಒಳಗೊಂಡಿವೆ.
PublicNext
03/09/2022 10:39 pm