ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹತ್ರಾಸ್ ಗ್ಯಾಂಗ್ ರೇಪ್ ಕೇಸ್ : SP, DSP ಸೇರಿ ಹಲವು ಅಧಿಕಾರಿಗಳ ಅಮಾನತು ಆದೇಶ ಜಾರಿಮಾಡಿದ ಸಿಎಂ ಯೋಗಿ

ಲಖನೌ: ಹತ್ರಾಸ್ ಅತ್ಯಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಲವು ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ.

ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಪೊಲೀಸ್ ವರಿಷ್ಠಾಧಿಕಾರಿ, ಉಪ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್ಪೆಕ್ಟರ್ ಸೇರಿ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನ ನೀಡಿದ್ದಾರೆ.

ಹತ್ರಾಸ್ ನಲ್ಲಿ ನಡೆದ 19 ವರ್ಷದ ದಲಿತ ಮಹಿಳೆಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆ ನಡೆಸಿದ ಆರೋಪದ ವಿರುದ್ಧ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ನಂತರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಈ ಪ್ರಕಟಣೆ ಬಂದಿದೆ.

Edited By : Nirmala Aralikatti
PublicNext

PublicNext

02/10/2020 10:25 pm

Cinque Terre

135.44 K

Cinque Terre

8