ಹತ್ಯಾಸ್ : ಸೆ. 14 ರಂದು ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿ ಎರಡು ವಾರಗಳ ಹಿಂದೆ ದೆಹಲಿಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ 20 ವರ್ಷದ ಯುವತಿ ಕೊನೆಯುಸಿರೆಳೆದಿದ್ದರು.
ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಿಎಂ ಯೋಗಿ ಆದಿತ್ಯನಾಥ್, ಪ್ರಕರಣದ ತನಿಖೆಯನ್ನು ಮೂವರು ಸದಸ್ಯರನ್ನೊಳಗೊಂಡ ಎಸ್‌ಐಟಿಗೆ ವಹಿಸಲಾಗಿದ್ದು, ತನಿಖಾ ದಳಕ್ಕೆ ಮುಂದಿನ 7 ದಿನಗಳೊಳಗಾಗಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಶೀಘ್ರ ನ್ಯಾಯ ಒದಗಿಸುವ ಉದ್ದೇಶದಿಂದ ಈ ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗುತ್ತದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಸೆ.14 ರಂದು ಯುವತಿಯು ತಮ್ಮ ಜಮೀನಿನಲ್ಲಿ ತಾಯಿಯೊಂದಿಗೆ ಹುಲ್ಲು ಕೀಳುತ್ತಿದ್ದ ಯುವತಿಯನ್ನು ಎಳೆದೊಯ್ದ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಅತ್ಯಾಚಾರವೆಸಗಿದ್ದಾರೆ, ಘಟನೆಯಲ್ಲಿ ಯುವತಿಗೆ ತೀವ್ರ ಗಾಯವಾಗಿದ್ದು, ಆಕೆಯ ನಾಲಿಗೆ ಕತ್ತರಿಸಿ ಹೋಗಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿ ಮಂಗಳವಾರ ಬೆಳಗ್ಗೆ ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.
PublicNext
30/09/2020 12:49 pm