ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹತ್ರಾಸ್ ಗ್ಯಾಂಗ್ ರೇಪ್ ಕೇಸ್ : ಎಸ್ ಐಟಿ ವರದಿ ಸಲ್ಲಿಕೆಗೆ ಗಡುವು ಹೆಚ್ಚಿಸಿದ ಯೋಗಿ

ಲಖನೌ : ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ವರದಿ ಸಲ್ಲಿಕೆಗೆ ಯೋಗಿ ಆದಿತ್ಯನಾಥ್ ಸರ್ಕಾರ ವಿಶೇಷ ತನಿಖಾ ದಳ (ಎಸ್ ಐಟಿ) ಗೆ 10 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಿದೆ.

'ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವರದಿಯನ್ನು ಎಸ್ ಐಟಿ ಬುಧವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಸಲ್ಲಿಸಬೇಕಿತ್ತು.

ಆದರೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವರದಿ ಸಲ್ಲಿಕೆಗೆ ನೀಡಿದ್ದ ಗಡುವನ್ನು ಮುಂದಿನ 10 ದಿನಗಳವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ' ಎಂದು ಗೃಹ ಇಲಾಖೆಯ ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಅವಸ್ಥಿ ಹೇಳಿದ್ದಾರೆ.

ಮೂರು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹತ್ರಾಸ್ ನ 19 ವರ್ಷದ ಯುವತಿ ದೆಹಲಿಯಲ್ಲಿ ಮಂಗಳವಾರ ಮೃತಪಟ್ಟಿದ್ದರು.

ಮೂಳೆ ಮುರಿತ ಮತ್ತು ನಾಲಿಗೆಯು ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು.

ಮೃತಪಟ್ಟ ಯುವತಿಯ ಅಂತ್ಯಕ್ರಿಯೆಯನ್ನು ಉತ್ತರ ಪ್ರದೇಶ ಪೊಲೀಸರು ನಡುರಾತ್ರಿಯಲ್ಲೇ ಯುವತಿ ಕುಟುಂಬಸ್ಥರಿಗೂ ಅವಕಾಶ ನೀಡದೆ ಮಾಡಿ ಮುಗಿಸಿದ್ದರು.

ಈ ಘಟನೆಯು ದೇಶದಾದ್ಯಂತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Edited By : Nirmala Aralikatti
PublicNext

PublicNext

07/10/2020 12:06 pm

Cinque Terre

74.23 K

Cinque Terre

0

ಸಂಬಂಧಿತ ಸುದ್ದಿ