ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹತ್ರಾಸ್ ಅತ್ಯಾಚಾರ ಪ್ರಕರಣ: SP ಸೇರಿ ನಾಲ್ವರು ಪೊಲೀಸರ ಅಮಾನತು

ಲಖನೌ: ಹತ್ರಾಸ್‌ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ರಾಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಕ್ರಾಂತ್ ವೀರ್ ಸೇರಿದಂತೆ ನಾಲ್ವರು ಪೊಲೀಸರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ.

ವಿನೀತ್ ಜೈಸ್ವಾಲ್ ಅವರನ್ನು ಹಾಥರಸ್‌ ಎಸ್‌ಪಿ ಆಗಿ ನಿಯೋಜಿಸಲಾಗಿದೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಅವನೀಶ್ ಅವಸ್ಥಿ ತಿಳಿಸಿದ್ದಾರೆ.

ನಮ್ಮನ್ನು ಮಾಧ್ಯಮದವರ ಜೊತೆ ಮಾತನಾಡಲು ಬಿಡುತ್ತಿಲ್ಲ, ಇಡೀ ಗ್ರಾಮವನ್ನು ಸ್ಥಳೀಯ ಪೊಲೀಸರು ಸುತ್ತುವರೆದಿದ್ದು ಮನೆಯಿಂದ ಹೊರಗೆ ಬಿಡುತ್ತಿಲ್ಲ ಎಂದು ಪೊಲೀಸರ ವಿರುದ್ಧ ಯುವತಿ ಕುಟುಂಬದವರು ಆರೋಪಿಸಿದ್ದಾರೆ, ಮಾಧ್ಯಮ ಪ್ರತಿನಿಧಿಗಳಿಗೆ ಗ್ರಾಮಕ್ಕೆ ಪ್ರವೇಶಿಸಲು ನಿರಾಕರಿಸಲಾಗುತ್ತಿದೆ ಎಂದು ದೂರಿದ್ದಾರೆ.

ಯುವತಿ ಮೃತಪಟ್ಟ ಸಂದರ್ಭದಲ್ಲಿ ಕುಟುಂಬದರನ್ನು ದೂರವಿಟ್ಟು ಅಂತ್ಯ ಸಂಸ್ಕಾರ ಮಾಡಿದ್ದ ಪೊಲೀಸರ ನಡೆಗೆ ದೇಶಾದ್ಯಂತ ತೀವ್ರ ಆಕ್ರೊಶ ವ್ಯಕ್ತವಾಗಿದೆ. ದೆಹಲಿ ಸೇರಿದಂತೆ ದೇಶದಾದ್ಯಂತ ಸಂತ್ರಸ್ತೆಗೆ ನ್ಯಾಯಕ್ಕಾಗಿ ವಿವಿಧ ಪಕ್ಷಗಳು ಹಾಗೂ ಸಂಘಟನೆಗಳ ಸದಸ್ಯರು ಶುಕ್ರವಾರ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಘಟನೆಯ ತನಿಖೆ ನಡೆಸುತ್ತಿರುವ ಎಸ್‌ಐಟಿ ಶುಕ್ರವಾರ ಪ್ರಾಥಮಿಕ ವರದಿ ನೀಡಿದ್ದು, ಇದರ ಆಧಾರದ ಮೇಲೆ ಹಾಥರಸ್ ಎಸ್‌ಪಿ ವಿಕ್ರಾಂತ್ ವೀರ್ ಹಾಗೂ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

Edited By :
PublicNext

PublicNext

03/10/2020 07:56 am

Cinque Terre

93.83 K

Cinque Terre

3

ಸಂಬಂಧಿತ ಸುದ್ದಿ