ಚಂಡೀಗಢ: ಹಾಸ್ಟೆಲ್ ವಿದ್ಯಾರ್ಥಿನಿಯರ ಸ್ನಾನದ ವಿಡಿಯೋ ಲೀಕ್ ಪ್ರಕರಣವು ವ್ಯಾಪಕ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಪಂಜಾಬ್ನ ಮೊಹಾಲಿಯಲ್ಲಿರುವ ಚಂಗೀಗಢ ವಿಶ್ವವಿದ್ಯಾಲಯವನ್ನು ಐದು ದಿನ ಬಂದ್ ಮಾಡಲಾಗಿದೆ.
ವಿದ್ಯಾರ್ಥಿನಿಯರು ಸೇರಿದಂತೆ ಸಾವಿರಾರು ಮಂದಿ ವಿವಿ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಸದ್ಯ ಪ್ರತಿಭಟನೆ ತಣ್ಣಗಾಗಿದೆಯಾದರೂ ಮುಂಜಾಗ್ರತಾ ಕ್ರಮವಾಗಿ ಸೆ.24ರವರೆಗೂ ವಿವಿಗೆ ರಜೆ ಘೋಷಿಸಲಾಗಿದೆ. ಪ್ರಕರಣ ಬೆಳಕಿಗೆ ಬಂದಾಗಿನಿಂದ ವಿದ್ಯಾರ್ಥಿನಿಯರು ಭಯಭೀತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕರು ಹಾಸ್ಟೆಲ್ ತೊರೆದು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಲಗೇಜ್ ಪ್ಯಾಕ್ ಮಾಡಿಕೊಂಡು ವಿದ್ಯಾರ್ಥಿನಿಯರು ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದ್ದಾರೆ.
ಹಾಸ್ಟೆಲ್ನಲ್ಲಿ ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವುದನ್ನು ಸಹಪಾಠಿ ವಿದ್ಯಾರ್ಥಿನಿಯೊಬ್ಬಳು ವಿಡಿಯೋ ಮಾಡಿ ಅದನ್ನು ಶಿಮ್ಲಾದಲ್ಲಿರುವ ತನ್ನ ಸ್ನೇಹಿತನಿಗೆ ಕಳುಹಿಸಿದ್ದಾಳೆ. ಸ್ನಾನದ ವಿಡಿಯೋ ಲೀಕ್ ಮಾಡಿದ ವಿದ್ಯಾರ್ಥಿನಿ ಹಾಗೂ ಆಕೆಯ ಬಾಯ್‌ಫ್ರೆಂಡ್ ಸನ್ನಿ ಮೆಹ್ತಾ ಹಾಗೂ ಮತ್ತೊಬ್ಬ ಪರಿಚಿತ ಯುವಕ ರಂಕಜ್ ವರ್ಮಾನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇನ್ನು ಈ ಘಟನೆಯಿಂದ ಭಯಭೀತರಾದ ಅನೇಕ ವಿದ್ಯಾರ್ಥಿನಿಯರು ಹಾಸ್ಟೆಲ್ ತೊರೆದು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.
PublicNext
19/09/2022 05:51 pm