ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಸ್ಟ್ರೇಲಿಯಾದಲ್ಲಿ ಕನ್ನಡತಿ ಕೊಲೆ - ಸುಳಿವು ಕೊಟ್ರೆ 1 ಮಿಲಿಯನ್ ಡಾಲರ್ ಬಹುಮಾನ

ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ 9 ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣ ಇನ್ನೂ ಪತ್ತೆಯಾಗದೇ ನಿಗೂಢವಾಗಿ ಉಳಿದಿದೆ.

2015 ಮಾರ್ಚ್ 7ರಂದು ಕರ್ನಾಟಕ ಮೂಲದ ಸಾಫ್ಟ್ ವೇರ್ ಎಂಜಿನಿಯರ್ ಪ್ರಭ ಅರುಣ್ ಕುಮಾರ್ (41) ಅವರ ಹತ್ಯೆಯಾಗಿತ್ತು. ಈ ಕೊಲೆ ಕೇಸ್‌ನಲ್ಲಿ ಭಾಗಿಯಾದವರು ಯಾರು? ಯಾಕೆ ಕೊಲೆ ಆಯಿತು ಎಂಬ ಸಂಗತಿ ಇನ್ನೂ ನಿಗೂಢವಾಗಿದೆ. ಈ ಕೇಸ್ ಬಗೆಹರಿಸಲು ಸಹಾಯ ಮಾಡುವ ವ್ಯಕ್ತಿಗೆ 1 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ ಆಸ್ಟ್ರೇಲಿಯಾದ ನ್ಯೂ ಸೌತ್‌ ವೇಲ್ಸ್ ಸರ್ಕಾರ ಘೋಷಣೆ ಮಾಡಿದೆ.

ಪ್ರಭಾ ಅವರು ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಸಿಡ್ನಿಯ ಪಶ್ಚಿಮದಲ್ಲಿನ ಪರಮಟ್ಟ ಪಾರ್ಕ್‌ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಘಟನೆಯಾಗಿ 10 ವರ್ಷಗಳೇ ಕಳೆಯುತ್ತಾ ಬಂದರು, ಒಂದೇ ಒಂದು ಸುಳಿವು ಸಿಗದೆ, ಪ್ರಕರಣವನ್ನು ಭೇದಿಸಲು ಆಸ್ಟ್ರೇಲಿಯಾ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಈ ಪ್ರಕರಣದ ತನಿಖೆಗೆ ಪೊಲೀಸರು ವಿಶೇಷ ತಂಡವನ್ನು ರಚಿಸಲಾಗಿತ್ತು. ಅನೇಕ ರೀತಿಯಲ್ಲಿ ತನಿಖೆಯನ್ನು ನಡೆಸಲಾಗುತ್ತಿತ್ತು. ಜೊತೆಗೆ ತನಿಖೆಗೆ ಸಾರ್ವಜನಿಕರ ನೆರವನ್ನು ಕೂಡ ಕೋರಲಾಗಿತ್ತು. ಆದರೆ ಪ್ರಕರಣದಲ್ಲಿ ಯಾವುದೇ ಸುಳಿವು ಸಿಗದ ಹಿನ್ನಲೆ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಈ ನಿಟ್ಟಿನಲ್ಲಿ ಈ ಪ್ರಕರಣವನ್ನು ಬಗೆಹರಿಸಲು ಸಹಾಯ ಮಾಡುವ ವ್ಯಕ್ತಿಗೆ 1ಮಿಲಿಯನ್ ಡಾಲರ್ ಬಹುಮಾನವನ್ನು ನೀಡುವುದಾಗಿ ಆಸ್ಟ್ರೇಲಿಯಾ ಸರ್ಕಾರ ಘೋಷಿಸಿದೆ.

Edited By : Nagaraj Tulugeri
PublicNext

PublicNext

29/10/2024 06:46 pm

Cinque Terre

46.64 K

Cinque Terre

1

ಸಂಬಂಧಿತ ಸುದ್ದಿ