ಕಾಬೂಲ್: ಅಪ್ಘಾನಿಸ್ತಾನದ ಮೇಲೆ ಮತ್ತೊಮ್ಮೆ ದಾಳಿ ಮಾಡಿರುವ ತಾಲಿಬಾನ್ ಪಡೆ ದಕ್ಷಿಣ ಭಾಗದ ನಾಲ್ಕು ನಗರಗಳನ್ನು ವಶಪಡಿಸಿಕೊಂಡಿದೆ. ಈ ಮೂಲಕ ಅಪ್ಘಾನಿಸ್ತಾನದ ಶೇ 75 ಭಾಗದ ಮೇಲೆ ತಾಲಿಬಾನ್ ಹಿಡಿತ ಸಾಧಿಸಿದಂತಾಗಿದೆ.
ಎರಡು ದಶಕಗಳ ಅವಧಿಯಲ್ಲಿ ಅಮೆರಿಕ, ಬ್ರಿಟನ್ ಮತ್ತು ನ್ಯಾಟೋ ಪಡೆಗಳು ಅತಿಹೆಚ್ಚು ದಾಳಿಗಳನ್ನು ನಡೆಸಿದ ಹೆಲ್ಮಾಂಡ್ ಪ್ರಾಂತವನ್ನು ಬಂಡುಕೋರರು ವಶಪಡಿಸಿಕೊಂಡಿದ್ದಾರೆ. ಇದು ಕಾಬೂಲ್'ಗೆ ಸನಿಹದಲ್ಲಿದೆ. ಜೊತೆಗೆ ಜಬುಲ್ ಹಾಗೂ ಉರುಜ್ಗಲ್ ಎಂಬ ಇನ್ನೆರಡು ಪ್ರಾಂತಗಳನ್ನೂ ವಶಪಡಿಸಿಕೊಂಡಿದ್ದಾರೆ.
ಬಹುತೇಕ ಈಗ ತಾಲಿಬಾನಿಗಳು ರಾಜಧಾನಿ ಕಾಬೂಲ್'ನ್ನೂ ಸುತ್ತುವರೆದಂತಾಗಿದ್ದು, ರಾಜಧಾನಿ ರಕ್ಷಣೆಗೆ ಆಫ್ಘಾನಿಸ್ತಾನ ಸರ್ಕಾರ ಹೋರಾಡುತ್ತಿದೆ. ತಾಲಿಬಾನ್ ಉಗ್ರರು ಕಂದಹಾರ್ ವಶಪಡಿಸಿಕೊಂಡಿರುವ ಬಗ್ಗೆ ನಿನ್ನೆ ಬೆಳಿಗ್ಗೆ ವರದಿಯಾಗಿತ್ತು.
PublicNext
14/08/2021 08:04 am