ಕಾಬೂಲ್: ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬೆನ್ನಲ್ಲೇ ಜನರು ದೇಶ ತೊರೆಯಲು ಆರಂಭಿಸಿದ್ದಾರೆ. ಉಗ್ರರಿಗೆ ಎಷ್ಟು ಭಯಗೊಂಡಿದ್ದಾರೆ ಎಂದರೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಒಂದು ವಿಮಾನಕ್ಕೆ ಹತ್ತಲು ಸಾವಿರಾರು ಜನ ಮುಗಿಬಿದ್ದಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ವಿಮಾನ ಹತ್ತಲು ನಿಯಮಗಳು ಇರುತ್ತದೆ.
ದಾಖಲೆಗಳನ್ನು ಪರಿಶೀಲಿಸಿದ ಬಳಿಕ ವಿಮಾನ ಹತ್ತಲು ಅನುಮತಿ ನೀಡಲಾಗುತ್ತದೆ. ಆದರೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಸ್ ಹತ್ತಲು ಪ್ರಯಾಣಿಕರು ಹೇಗೆ ಮುಗಿಬೀಳುತ್ತಾರೋ ಆ ರೀತಿಯಾಗಿ ಒಂದು ಏಣಿ ಮೂಲಕ ವಿಮಾನ ಹತ್ತಲು ಪ್ರಯತ್ನಿಸಿದ್ದಾರೆ. ಉಗ್ರರಿಂದ ಪ್ರಾಣ ಉಳಿದರೆ ಸಾಕು ಎಂದು ವಿಮಾನ ನಿಲ್ದಾಣಕ್ಕೆ ಜನರು ನುಗ್ಗಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ.
PublicNext
16/08/2021 02:24 pm