ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತ ವಿರೋಧಿ ಸುಳ್ಳು ಸುದ್ದಿ ಪ್ರಸಾರ: ಪಾಕಿಸ್ತಾನದ 35 ಯೂಟ್ಯೂಬ್‌ ಚಾನೆಲ್‌ ಬ್ಲಾಕ್

ನವದೆಹಲಿ: ದೇಶಕ್ಕೆ ಅವಮಾನಕರ ಹಾಗೂ ದೇಶ ವಿರೋಧಿ ಸುಳ್ಳು ಸುದ್ದಿಗಳನ್ನು ಬಿತ್ತರಿಸುತ್ತಿದ್ದ ಪಾಕಿಸ್ತಾನ ಮೂಲದ 35 ಯೂಟ್ಯೂಬ್‌ ಚಾನೆಲ್‌ಗಳನ್ನು ಬ್ಲಾಕ್ ಮಾಡಲಾಗಿದೆ. ಇದರೊಂದಿಗೆ ಎರಡು ಟ್ವಿಟ್ಟರ್‌, ಎರಡು ಇನ್‌ಸ್ಟಾಗ್ರಾಮ್‌ ಖಾತೆಗಳು ಸೇರಿ ಹಲವು ಫೇಸ್‌ಬುಕ್‌ ಖಾತೆಗಳನ್ನು ಬ್ಲಾಕ್ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸ್ಥಗಿತಗೊಳಿಸಿದೆ.

ಈ ಎಲ್ಲ ಖಾತೆಗಳು ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿದ್ದವು. ಭಾರತ ವಿರೋಧಿ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದವು ಎಂದು ಸಚಿವಾಲಯದ ಜಂಟಿ ಕಾರ್ಯದರ್ಶಿ ವಿಕ್ರಮ್‌ ಸಹಾಯ್‌ ತಿಳಿಸಿದ್ದಾರೆ. ಎಲ್ಲ ಖಾತೆಗಳನ್ನು ನಿರ್ಬಂಧಿಸಲು ಟೆಲಿಕಾಂ ಇಲಾಖೆಯ ಮೂಲಕ ಆಯಾ ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಇಂಟರ್ನೆಟ್‌ ಸೇವಾ ಪೂರೈಕೆದಾರರಿಗೆ ಸಚಿವಾಲಯ ಆದೇಶ ಹೊರಡಿಸಿದೆ.

ನಿರ್ಬಂಧಿಸಲಾದ ಖಾತೆಗಳಲ್ಲಿ ಭಾರತೀಯ ಸಶಸ್ತ್ರ ಪಡೆಗಳು, ಕಾಶ್ಮೀರ, ಇತರ ದೇಶಗಳೊಂದಿಗೆ ಭಾರತದ ವಿದೇಶಿ ಸಂಬಂಧ, ಮಾಜಿ ಸಿಡಿಎಸ್‌ ಬಿಪಿನ್‌ ರಾವತ್‌ ಅವರ ಸಾವಿಗೆ ಸಂಬಂಧಿಸಿದ ವಿಷಯಗಳಿವೆ. ಈ ಖಾತೆಗಳು 130 ಕೋಟಿ ವೀಕ್ಷಕರು ಮತ್ತು 1.2 ಕೋಟಿ ಸಬ್‌ಸ್ಕ್ರೈಬರ್ಸ್‌ನ್ನು ಹೊಂದಿದ್ದವು ಎಂದು ಸಚಿವಾಲಯ ತಿಳಿಸಿದೆ.

Edited By : Nagaraj Tulugeri
PublicNext

PublicNext

22/01/2022 08:06 am

Cinque Terre

52.38 K

Cinque Terre

7