ವಾಷಿಂಗ್ಟನ್: ಅಮೆರಿಕದ ಒಕ್ಲಹೋಮದ ಟುಲ್ಸಾ ಆಸ್ಪತ್ರೆಯ ಆವರಣದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿರುವ ಘಟನೆ ನಡೆದಿದೆ.
ಒಕ್ಲಹೋಮದ ಮೆಡಿಕಲ್ ಕಾಲೇಜಿನಲ್ಲಿ ಬಂಧೂಕುದಾರಿಯೊಬ್ಬ ಫೈರಿಂಗ್ ನಡೆಸಿದ್ದು, ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂದೂಕುಧಾರಿ ಕೂಡ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಅದು ಹೇಗೆ ಎಂಬುದು ಸ್ಪಷ್ಟವಾಗಿಲ್ಲ. ಸೇಂಟ್ ಫ್ರಾನ್ಸಿಸ್ ಆಸ್ಪತ್ರೆಯ ಆವರಣವನ್ನು ತೆರವುಗೊಳಿಸಲು ಅಧಿಕಾರಿಗಳು ಇನ್ನೂ ಕೆಲಸ ಮಾಡುತ್ತಿದ್ದಾರೆ.
PublicNext
02/06/2022 10:17 am