ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂ ಬಾಲಕಿಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಪಾಕಿಸ್ತಾನದ ಚಪ್ಪರ್ ದಿನ್ ಶಾ ಎಂಬಲ್ಲಿ ಈ ಘಟನೆ ಇತ್ತೀಚೆಗಷ್ಟೇ ನಡೆದಿದೆ. 15 ವರ್ಷದ ಬಾಲಕಿಯನ್ನು ಅಪಹರಿಸಿದ ಕಾಮುಕರು ಆಕೆಯನ್ನು ಅರಣ್ಯ ಪ್ರದೇಶಕ್ಕೆ ಕರೆತಂದು ಅತ್ಯಾಚಾರ ಎಸಗಿದ್ದಾರೆ.
ಪೊಲೀಸರ ಮುಂದೆ ಹೇಳಿಕೆ ನೀಡಿರುವ ಬಾಲಕಿ ಮುಸ್ತಾಕ್ ಬಾಜಿರ್ ಹಾಗೂ ನಭಿ ಭಕ್ಷ್ ಬಾಜಿರ್ ಎಂಬ ಇಬ್ಬರು ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಹೇಳಿದ್ದಾಳೆ. ಬಾಲಕಿ ಹೇಳಿಕೆ ಆಧಾರಿತವಾಗಿ ಪೊಲೀಸರು ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
PublicNext
05/10/2022 10:44 pm