ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರ್ಮಿಕ ದ್ವೇಷಕ್ಕೆ ಪ್ರಚೋದನೆ ಆರೋಪ: ಪತ್ರಕರ್ತ ಮೊಹಮ್ಮದ್ ಜುಬೈರ್ ಬಂಧನ

ನವದೆಹಲಿ: ಧಾರ್ಮಿಕ ದ್ವೇಷ ಬೆಳೆಯಲು ಉತ್ತೇಜಿಸಿದ ಹಾಗೂ ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದ ಆರೋಪದ ಮೇಲೆ ಪತ್ರಕರ್ತ ಹಾಗೂ ಆಲ್ಟ್ ನ್ಯೂಸ್ ವೆಬ್‌ಸೈಟ್ ಸಂಸ್ಥಾಪಕರಲ್ಲಿ ಒಬ್ಬರಾದ ಮೊಹಮ್ಮದ್ ಜುಬೈರ್ ಅವರನ್ನು ನವದೆಹಲಿ ಪೊಲೀಸರು ಬಂಧಿಸಿದ್ದಾರೆ.

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಪ್ರತೀಕ್ ಸಿನ್ಹಾ, ಮೊಹಮ್ಮದ್ ಜುಬೇರ್ ಅವರನ್ನು ಬೇರೆ ಪ್ರಕರಣದಲ್ಲಿ ವಿಚಾರಣೆಗಾಗಿ ದೆಹಲಿಗೆ ಕರೆಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ನಮಗೆ ಈ ಬಗ್ಗೆ ಕಡ್ಡಾಯ ಸೂಚನೆಯನ್ನೂ ನೀಡಿಲ್ಲ ಎಂದು ಸಿನ್ಹಾ ಆರೋಪಿಸಿದ್ದಾರೆ. ಪದೇ ಪದೇ ಮನವಿ ಮಾಡಿದರೂ ಎಫ್‌ಐಆರ್ ಪ್ರತಿಯನ್ನು ನೀಡುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಆದಾಗ್ಯೂ, ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಮೊಹಮ್ಮದ್ ಜುಬೇರ್ ಅವರನ್ನು ತನಿಖೆ ನಡೆಸಲಾಗ್ತಿದೆ. ಸಾಕಷ್ಟು ಪುರಾವೆಗಳನ್ನು ಸಂಗ್ರಹಿಸಿದ ನಂತರವಷ್ಟೇ ಜುಬೈರ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಕಸ್ಟಡಿಗೆ ಪಡೆಯಲು ಪೊಲೀಸರು ನಾಳೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಈ ಘಟನೆಯನ್ನು 'ಸತ್ಯದ ಮೇಲಿನ ಹಲ್ಲೆ' ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ಶಶಿ ತರೂರ್, ಕೂಡಲೇ ಜುಬೈರ್ ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

Edited By : Nagaraj Tulugeri
PublicNext

PublicNext

28/06/2022 08:04 am

Cinque Terre

49.31 K

Cinque Terre

4

ಸಂಬಂಧಿತ ಸುದ್ದಿ