ಚಿತ್ರದುರ್ಗ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಇಲ್ಲಿನ ನಜರಾಬಾದ್ ಠಾಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ಶುಕ್ರವಾರ ದೂರು ದಾಖಲಾಗಿದೆ.
ಸದ್ಯ ಶ್ರೀಗಳ ನಡೆಯನ್ನು ಖಂಡಿಸಿರುವ ಗ್ರಾಮಸ್ಥರು ಶಿವಮೂರ್ತಿ ಮುರುಘಾ ಶರಣರ ಪ್ರತಿಮೆ ಧ್ವಂಸಗೊಳಿಸಿದ್ದಾರೆ. ಹೌದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮದಲ್ಲಿ ನಿರ್ಮಿಸಲಾಗಿದ್ದ ಶಿವಮೂರ್ತಿ ಮುರುಘಾ ಶರಣರ ಪ್ರತಿಮೆಯನ್ನು ಗ್ರಾಮಸ್ಥರು ಸೋಮವಾರ ಧ್ವಂಸಗೊಳಿಸಿದ್ದಾರೆ.
ಸದ್ಯ ಗ್ರಾಮಸ್ಥರು ಶ್ರೀಗಳ ಮೂರ್ತಿ ಧ್ವಂಸಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
PublicNext
29/08/2022 03:08 pm