ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಡಾನ್ ಮುತ್ತಪ್ಪ ರೈ ಪುತ್ರ `ರಿಕ್ಕಿ ರೈ' ಅರೆಸ್ಟ್

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅವರನ್ನು ವಶಕ್ಕೆ ಪಡೆದಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪದಲ್ಲಿ ರಿಕ್ಕಿ ರೈ ಅವರು ಡ್ರಗ್ಸ್ ಆರೋಪಿಗಳ ಜೊತೆ ಸಂಪರ್ಕದಲ್ಲಿದ್ದರು ಎನ್ನುವ ಆರೋಪದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಎಸಿಬಿ ವೇಣುಗೋಪಾಲ್ ನೇತೃತ್ವದಲ್ಲಿ ರೇಡ್ ಮಾಡಲಾಗಿತ್ತು. ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವಾ ಜೊತೆ ರಿಕ್ಕಿ ರೈ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.

ಬಂಧನಕ್ಕೆ ಪಡೆದಿರುವ ರಿಕ್ಕಿ ರೈಯನ್ನು ಪೊಲೀಸರು ಮೈಸೂರಿನ ಮಾರ್ಗವಾಗಿ ಕರೆದುಕೊಂಡು ಹೋಗುತ್ತಿದ್ದಾರೆ.

ಬಿಡದಿಯಲ್ಲಿ ರಿಕ್ಕಿ ರೈ ತೋಟದ ಮನೆ ಇದೆ. ಹಾಗಾಗಿ ತೋಟದ ಮನೆಯಲ್ಲಿ ಶೋಧ ನಡೆಸಲು ಪೊಲೀಸರು ಕರೆದುಕೊಂಡು ಹೋಗಲಾಗ್ತಿದೆ ಎನ್ನಲಾಗಿದೆ.

Edited By : Nirmala Aralikatti
PublicNext

PublicNext

06/10/2020 10:55 am

Cinque Terre

90.07 K

Cinque Terre

2

ಸಂಬಂಧಿತ ಸುದ್ದಿ