ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಲ್ಘರ್ ಗಲಭೆ ಪ್ರಕರಣ : ಆರೋಪಿಗಳಿಗೆ ಜಾಮೀನು

ಠಾಣೆ: ಕಳೆದ ವರ್ಷದ ಏಪ್ರಿಲ್ ನಲ್ಲಿ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ನಡೆದಿದ್ದ ಗುಂಪು ಹಲ್ಲೆ ಪ್ರಕರಣದ 89 ಆರೋಪಿಗಳಿಗೆ ಇಲ್ಲಿನ ವಿಶೇಷ ನ್ಯಾಯಾಲಯವು ಶನಿವಾರ ಜಾಮೀನು ಮಂಜೂರು ಮಾಡಿದೆ.

ಪಾಲ್ಘರ್ ಜಿಲ್ಲೆಯ ಗ್ರಾಮವೊಂದರಲ್ಲಿ ಮಕ್ಕಳ ಕಳ್ಳರೆಂದು ಶಂಕಿಸಿ ಇಬ್ಬರು ಸಾಧುಗಳು ಹಾಗೂ ಅವರ ಕಾರಿನ ಚಾಲಕನನ್ನು ನೂರಾರು ಜನ ದೊಣ್ಣೆಗಳಿಂದ ಹೊಡೆದು ಕೊಂದಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಎಸ್.ಬಿ.ಬಹಲ್ಕರ್ ಅವರು ಆರೋಪಿಗಳಿಗೆ ಜಾಮೀನು ನೀಡಿ, ವಿಚಾರಣೆಯನ್ನು ಫೆಬ್ರುವರಿ 15ಕ್ಕೆ ಮುಂದೂಡಿದರು.

Edited By : Nirmala Aralikatti
PublicNext

PublicNext

16/01/2021 08:22 pm

Cinque Terre

64.36 K

Cinque Terre

2