ಬೆಂಗಳೂರು : ಬೆಂಗಳೂರಿನ 'ಕಾರ್ಪೊರೇಷನ್ ATM'ನಲ್ಲಿ ಮಹಿಳೆಯ ಮೇಲೆ ಹಲ್ಲೆ ಪ್ರಕರಣದ ಆರೋಪಿ 'ಮಧುಕರ್ ರೆಡ್ಡಿ'ಗೆ 12 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ನವೆಂಬರ್ 19, 2013ರಂದು ಕಾರ್ಪೋರೇಷನ್ ಸರ್ಕಲ್ ನಲ್ಲಿನ ಕಾರ್ಪೋರೇಷನ್ ಎಟಿಎಂನಲ್ಲಿ ಮಹಿಳೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ, ಹಣ ದರೋಡೆ ಮಾಡಲಾಗಿತ್ತು.
ಈ ಪ್ರಕರಣ ಸಂಬಂಧ ಇದೀಗ ಆರೋಪಿ ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ್ದ ಆರೋಪಿ ಮಧುಕರ್ ರೆಡ್ಡಿಗೆ ನಗರದ 65ನೇ ಸೆಷನ್ಸ್ ನ್ಯಾಯಾಲಯ 12 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಎಂಟು ವರ್ಷಗಳ ಹಿಂದೆ ನಗರದ ಕಾರ್ಪೋರೇಶನ್ ವೃತ್ತದ ಎಟಿಎಂ ಕೇಂದ್ರದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಮೇಲೆ ಮಧುಕರ್ ರೆಡ್ಡಿ ಹಲ್ಲೆ ನಡೆಸಿದ ಆರೋಪ ಹೊತ್ತಿದ್ದ. ಈ ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಿರುವ 6ನೇ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ವರ ಅವರು ಸೋಮವಾರ( ಫೆ. 1 2021 ) ದೋಷಿ ಎಂದು ಘೋಷಿಸಿದ್ದರು.
ಪ್ರಕರಣ ಕುರಿತು ವಿಚಾರಣೆ ನಡೆಸಿದ 65ನೇ ಸಿಸಿಹೆಚ್ ಕೋರ್ಟ್, ಆರೋಪಿ ಮಧುಕರ್ ಶೆಟ್ಟಿ ಅಪರಾಧಿ ಎಂದು ತೀರ್ಪು ಪ್ರಕಟಿಸಿ 12 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.
PublicNext
02/02/2021 05:25 pm