ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ಸಾಹಿತಿ ಭಗವಾನ್ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಮಸಿ ಬಳಿದ ಘಟನೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ನಡೆದಿದೆ.
ಹಿಂದು ಧರ್ಮಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಭಗವಾನ್ರವರು ಇಂದು ಕೋರ್ಟ್ ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇದಾದ ಬಳಿಕ ಭಗವಾನ್ ಅವರು ಕೋರ್ಟ್ನಿಂದ ಹೊರಗೆ ಬಂದಾಗ ಮೀರಾ ರಾಘವೇಂದ್ರ ಅವರು ಮುಖಕ್ಕೆ ಮಸಿ ಬಳಿದಿದ್ದಾರೆ.
PublicNext
04/02/2021 02:35 pm