ಮುಂಬೈ: ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ರಾಜಸ್ಥಾನ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಜೋಧಪುರ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಈ ಕುರಿತು ಸಲ್ಮಾನ್ ಖಾನ್ ತಮ್ಮ ಅಭಿಮಾನಿಗಳ ಬೆಂಬಲಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.
‘ನನ್ನ ಎಲ್ಲ ಅಭಿಮಾನಿಗಳಿಗೆ, ನಿಮ್ಮ ಪ್ರೀತಿಯ ಬೆಂಬಲ ಮತ್ತು ಕಾಳಜಿಗೆ ಧನ್ಯವಾದಗಳು. ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ನೋಡಿಕೊಳ್ಳಿ. ದೇವರು ನಿಮ್ಮನ್ನು ಸಹ ಆಶೀರ್ವದಿಸುತ್ತಾನೆ’ ಎಂದು ಟ್ವೀಟ್ ಮಾಡಿದ್ದಾರೆ.
ಸಲ್ಮಾನ್ ಖಾನ್ ಅವರು 1998ರಲ್ಲಿ ‘ಹಮ್ ಸಾಥ್ ಸಾಥ್ ಹೈ’ ಸಿನಿಮಾ ಶೂಟಿಂಗ್ ವೇಳೆ ಜೋಧಪುರ್ ಬಳಿಯ ಕಂಕಣಿ ಗ್ರಾಮದಲ್ಲಿ ಕೃಷ್ಣಮೃಗ ಬೇಟೆಯಾಡಿದ್ದರು. ಬೇಟೆಯಾಡಲು ಪರವಾನಗಿ ಇಲ್ಲದ ಬಂದೂಕು ಬಳಕೆ ಮಾಡಲಾಗಿತ್ತು. ಅಕ್ರಮ ಶಸ್ತ್ರಾಸ್ತ್ರ ಬಳಕೆ ಮಾಡಿರುವ ಸಂಬಂಧ ಸಲ್ಮಾನ್ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು. ಈ ಮೂಲಕ ವಿಡಿಯೋ ಕಾನ್ಫರೆನ್ಸ್ ಮೂಲಕ ಗುರುವಾರ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಧೀಶ ರಾಘವೇಂದ್ರ ಕಚ್ವಾಲ್ ನೇತೃತ್ವದ ಪೀಠ ವಿಚಾರಣೆ ನಡೆಸಿ. ಸಲ್ಮಾನ್ ಖಾನ್ ಅವರನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.
PublicNext
12/02/2021 02:43 pm