ಮುಂಬೈ: ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿಸಿದ್ದ ಪಾಪಿ ತಂದೆಗೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯವು 30 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದೆ.
ಪುಣೆಯ 37 ವರ್ಷದ ವ್ಯಕ್ತಿ ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿ. ಈ ಪಾಪಿಯು ತನ್ನ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು. ಆದರೆ ಬಳಿಕ ನಡೆದ ಲೈಂಗಿಕ ಕಿರುಕುಳದ ಸಮಯದಲ್ಲಿ ಗರ್ಭಪಾತಕ್ಕೆ ಒಳಗಾಗಿದ್ದಳು.
PublicNext
21/02/2021 04:50 pm