ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿ: ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್

ಯಾದಗಿರಿ: ಸರ್ಕಾರಿ ಕೆಲಸ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು, ಹಣ ಸ್ವೀಕರಿಸುತ್ತಿದ್ದಾಗ ತಹಶೀಲ್ದಾರ್‌ರೊಬ್ಬರು ಸಿಕ್ಕಿಬಿದ್ದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಗುರುಮಠಕಲ್ ತಹಶೀಲ್ದಾರ್ ಸಂಗಮೇಶ್ ಜಿಡಗೆ ಲಂಚ ಪಡೆಯುವಾಗ ಸಿಕ್ಕಿಬಿದ್ದವರು. ಸಂಗಮೇಶ್ ಅವರು ರೈತರೊಬ್ಬರ ಜಮೀನು ಪಾಲು ವಿಚಾರಕ್ಕೆ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರ ಮುಂಗಡವಾಗಿ ಸೋಮವಾರದಂದು ಐದು ಸಾವಿರ ರೂಪಾಯಿ ಪಡೆದುಕೊಳ್ಳುತ್ತಿದ್ದರು. ಈ ವೇಳೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಸಂಗಮೇಶ್ ಅವರನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದಿದ್ದಾರೆ.

ಎಸಿಬಿ ಎಸ್‌ಪಿ ಮಹೇಶ್ ಮೇಘಣ್ಣವರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಡಿವೈಎಸ್ ಪಿ ಉಮಾಶಂಕರ್, ಪಿಎಸ್ ಐ ಗುರುಪಾದ್ ಬಿರಾದಾರ್ ದಾಳಿಯಲ್ಲಿ ಭಾಗಿಯಾಗಿದ್ದರು.

Edited By : Vijay Kumar
PublicNext

PublicNext

22/02/2021 06:01 pm

Cinque Terre

49.01 K

Cinque Terre

5

ಸಂಬಂಧಿತ ಸುದ್ದಿ