ನವದೆಹಲಿ: ಬೆಂಗಳೂರಿನ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರನ್ನು ದೆಹಲಿ ಕೋರ್ಟ್ ಸೋಮವಾರ ಮತ್ತೆ ಒಂದು ದಿನ ದೆಹಲಿ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ. ಟೂಲ್ ಕಿಟ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದಿಶಾ ಅವರನ್ನು ಸಹ-ಆರೋಪಿಗಳೊಂದಿಗೆ ವಿಚಾರಣೆ ನಡೆಸುವ ಅಗತ್ಯ ಇದ್ದು, ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮಾಡಿದ್ದ ಮನವಿಯನ್ನು ಪುರಷ್ಕರಿಸಿದ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪಂಕಜ್ ಶರ್ಮಾ ಅವರು, ದಿಶಾ ರವಿಯ ವಿಚಾರಣೆಗೆ ಅನುಮತಿ ನೀಡಿದ್ದಾರೆ.
ದಿಶಾ ರವಿ ಅವರ ಮೂರು ದಿನಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು, ವಿಚಾರಣೆ ನಡೆಸಿದ ಕೋರ್ಟ್ ಒಂದು ದಿನ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ. ವಿಚಾರಣೆ ವೇಳೆ ಐದು ದಿನಗಳ ಕಾಲ ದಿಶಾ ರವಿಯನ್ನು ಕಸ್ಟಡಿಗೆ ನೀಡಬೇಕು ಎಂದು ದೆಹಲಿ ಪೊಲೀಸರು ಕೇಳಿದ್ದರು. ಆದರೆ ಇದನ್ನು ಅಮಾನ್ಯ ಮಾಡಿದ ನ್ಯಾಯಾಲಯ ಒಂದು ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
PublicNext
22/02/2021 06:17 pm