ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಬಳಿ ಸಂಭವಿಸಿದ ಜಿಲೆಟಿನ್ ಸ್ಫೋಟ ದುರಂತಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಿಜೆಪಿ ಮುಖಂಡ ಗುಡಿಬಂಡೆ ನಾಗರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಮಿಳುನಾಡು ಮೂಲದ ಸ್ಫೋಟಕಕಾರ ಗಣೇಶ್ನನ್ನು ಬಂಧಿಸಲಾಗಿದ್ದು, ಪ್ರಕರಣ ಸಂಬಂಧ ಈವರೆಗೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಮುಖ ಆರೋಪಿ ನಾಗರಾಜ್, ಚಾಲಕ ರಿಯಾಜ್, ಮಧುಸೂದನ್ ರೆಡ್ಡಿ , ಪ್ರವೀಣ್, ವೆಂಕಟೇಶ ರೆಡ್ಡಿ, ರಾಘವೇಂದ್ರ ರೆಡ್ಡಿ, ಗಣೇಶ್ ಮತ್ತು ವೆಂಕಟಶಿವಾರೆಡ್ಡಿ ಬಂಧಿತ ಆರೋಪಿಗಳಾಗಿದ್ದಾರೆ. ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಗುಡಿಬಂಡೆ ಪೊಲೀಸ್ ಇನ್ ಸ್ಪೆಕ್ಟರ್ ಮಂಜುನಾಥ್ ಹಾಗೂ ಗುಡಿಬಂಡೆ ಗ್ರಾಮೀಣ ಠಾಣೆಯ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಗೋಪಾಲ ರೆಡ್ಡಿ ಅವರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ.
ಪ್ರಕರಣ ಸಂಬಂಧ ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
PublicNext
25/02/2021 10:03 am