ದಾವಣಗೆರೆ: ಶಿವಮೊಗ್ಗ, ಚಿಕ್ಕಬಳ್ಳಾಪುರದಲ್ಲಿ ಸ್ಫೋಟ ಸಂಭವಿಸಿದ ಬಳಿಕ ಬೆಣ್ಣೆನಗರಿಯಲ್ಲಿಯೂ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆಯು ಅಕ್ರಮವಾಗಿ ನಡೆಸಲಾಗುತ್ತಿರುವ ಕ್ವಾರಿಗಳ ಮೇಲೆ ದಾಳಿ ಮುಂದುವರಿಸಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಆಲೂರು ಗ್ರಾಮದ ಕಲ್ಲು ಕ್ವಾರಿ ಮೇಲೆ ದಾಳಿ ನಡೆಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ ಐ ಆರ್. ಜಿ. ಅಶ್ವಿನ್ ಕುಮಾರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ವಿನಯ್ ಬಣಕಾರ್ ನೇತೃತ್ವದ ತಂಡ ಭೇಟಿ ನೀಡಿದಾಗ ಸ್ಥಳದಲ್ಲಿ ಯಾರೂ ಇರಲಿಲ್ಲ.
ಕಲ್ಲು ಕ್ವಾರಿಯಲ್ಲಿ ಒಂದು ಜೀವಂತ ಎಲೆಕ್ಟ್ರಿಕ್ ಡಿಟೋನೇಟರ್ ಪತ್ತೆಯಾಗಿದ್ದು, ಕಲ್ಲು ಕ್ವಾರಿಯ ಜಮೀನಿನ ಮಾಲೀಕ ಕುಮಾರನಾಯ್ಕ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ಜಗಳೂರು ತಾಲೂಕಿನ ತಾಯ್ ಟೋನಿ ಗ್ರಾಮದಲ್ಲಿ ನಡೆಸಲಾಗುತ್ತಿದ್ದ ಕ್ವಾರಿ ಮೇಲೆ ದಾಳಿ ನಡೆಸಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.
PublicNext
25/02/2021 01:27 pm