ಭೂಗತ ಪಾತಕಿ ರಾಜೇಂದ್ರ ನಿಖಾಲ್ಜೆ ಅಲಿಯಾಸ್ ಛೋಟಾ ರಾಜನ್ ಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳವಾರ ಏಮ್ಸ್ ಗೆ ದಾಖಲಿಸಲಾಗಿದೆ. 61ವರ್ಷದ ಅವರಿಗೆ ಸದ್ಯ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಏಮ್ಸ್ಗೆ ದಾಖಲಿಸಲಾಗಿದೆ. ಈ ಮೊದಲು ಕೊವಿಡ್ 19 ಪಾಸಿಟಿವ್ ಆಗಿ ಅಡ್ಮಿಟ್ ಆಗಿದ್ದರು.
ಭೂಗತ ಪಾತಕಿ ಛೋಟಾ ರಾಜನ್ ಇಂಡೋನೇಷಿಯಾದ ಬಾಲಿಯಲ್ಲಿ 2015ರಲ್ಲಿ ಬಂಧಿಸಲಾಗಿತ್ತು. ಅದಾದ ಬಳಿಕ ಭಾರತಕ್ಕೆ ವಾಪಸ್ ಕರೆತಂದು ತಿಹಾರ್ ಜೈಲಿನಲ್ಲಿ ಇಡಲಾಗಿತ್ತು. 2011ರಲ್ಲಿ ನಡೆದಿದ್ದ ಪತ್ರಕರ್ತ ಜೆ.ಡೇ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2018ರಲ್ಲಿ ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಇನ್ನು ಛೋಟಾ ರಾಜನ್ ಸಾಮಾನ್ಯ ಕ್ರಿಮಿನಲ್ ಅಲ್ಲ. ಅವನ ಕೇಸ್ಗಳನ್ನು ಉಳಿದವರ ಕೇಸ್ ಗಳಂತೆ ಪರಿಗಣಿಸಬಾರದು ಆತನಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಸಿಬಿಐ (CBI) ಬಾಂಬೆ ಹೈಕೋರ್ಟ್ಗೆ ಬುಧವಾರ ಅರ್ಜಿ ಸಲ್ಲಿಸಿದೆ.
PublicNext
29/07/2021 03:27 pm