ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಶ್ಮೀರದಲ್ಲಿ ಕಲ್ಲು ಎಸೆದವರಿಗೆ ಇನ್ಮುಂದೆ ಸೆಕ್ಯುರಿಟಿ ಕ್ಲಿಯರೆನ್ಸ್ ಸಿಗಲ್ಲ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಲ್ಲು ತೂರಾಟ ಅಥವಾ ಯಾವುದೇ ವಿಧ್ವಂಸಕ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲರಿಗೂ ಪಾಸ್ ಪೋರ್ಟ್ ಮತ್ತಿತರ ಸರ್ಕಾರಿ ಸೇವೆಗಳಿಗೆ ಅಗತ್ಯವಾದ ಸೆಕ್ಯೂರಿಟಿ ಕ್ಲಿಯರೆನ್ಸ್ ನೀಡದಿರಲು ಜಮ್ಮು ಮತ್ತು ಕಾಶ್ಮೀರದ ಸಿಐಡಿ ಘಟಕ ಮತ್ತು ಪೊಲೀಸರು ಆದೇಶಿಸಿದ್ದಾರೆ.

ಪಾಸ್ ಪೋರ್ಟ್, ಸರ್ಕಾರದ ಸೇವೆಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ವೇಳೆಯಲ್ಲಿ ಕಲ್ಲು ತೂರಾಟ ಪ್ರಕರಣಗಳು ಮತ್ತಿತರ ರಾಜ್ಯದ ಭದ್ರತೆಗೆ ಸಂಬಂಧಿಸಿದ ವಿಧ್ವಂಸಕ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪರಿಶೀಲಿಸುವಂತೆ ಕಾನೂನು ಸುವ್ಯವಸ್ಥೆ ಪಾಲಕರಿಗೆ ಕಾಶ್ಮೀರದ ಹಿರಿಯ ಪೊಲೀಸ್ ಮಹಾನಿರ್ದೇಶಕರು, ಸಿಐಡಿ, ವಿಶೇಷ ಬ್ರಾಂಚ್ ಶನಿವಾರ ಆದೇಶ ಹೊರಡಿಸಿದ್ದಾರೆ.

Edited By : Nagaraj Tulugeri
PublicNext

PublicNext

02/08/2021 08:09 am

Cinque Terre

50.57 K

Cinque Terre

4

ಸಂಬಂಧಿತ ಸುದ್ದಿ