ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ್ ಕೊಲೆ ಕೇಸ್ : ಕುಸ್ತಿಪಟು ಸುಶೀಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ : ಯುವ ಕುಸ್ತಿಪಟು ಸಾಗರ್ ಧಂಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2 ಬಾರಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಇತರ 12 ಮಂದಿ ವಿರುದ್ಧ ಆರೋಪಪಟ್ಟಿ( ಚಾರ್ಜ್ಶೀಟ್) ಸಲ್ಲಿಕೆ ಮಾಡಲಾಗಿದೆ. ಮೂಲಗಳ ಪ್ರಕಾರ ಪೊಲೀಸರು ಪ್ರಕರಣದಲ್ಲಿ 50 ಮಂದಿಯನ್ನು ಸಾಕ್ಷಿಯಾಗಿ ಹಾಜರುಪಡಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಮೇ 4ರಂದು ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಕೊಲೆ ನಡೆದಿತ್ತು.

ಛತ್ರಸಾಲ್ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸುತ್ತಿದ್ದ ಜೂನಿಯರ್ ನ್ಯಾಷನಲ್ ಕುಸ್ತಿ ಚಾಂಪಿಯನ್ ಸಾಗರ್ ರಾಣಾ ಅವರನ್ನು ಸುಶೀಲ್ ಕುಮಾರ್ ಹಾಗೂ ಮತ್ತವರ ಸಂಗಡಿಗರು ಹತ್ಯೆ ಮಾಡಿದ್ದಾರೆ. ಈ ಸಂಬಂಧ ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತ ಸುಶೀಲ್ ಕುಮಾರ್ ಸದ್ಯ ತಿಹಾರ್ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.

Edited By : Nirmala Aralikatti
PublicNext

PublicNext

03/08/2021 02:18 pm

Cinque Terre

27.39 K

Cinque Terre

0

ಸಂಬಂಧಿತ ಸುದ್ದಿ