ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಾರಕಿಹೊಳಿ ಸಿ.ಡಿ ಕೇಸ್: ಹೈಕೋರ್ಟ್ ಅಸಮಧಾನಕ್ಕೆ ಕಾರಣವೇನು?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ಕೇಸ್ ಗೆ ಸಂಬಂಧಿಸಿದಂತೆ ಎಸ್ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿ ಅವರ ನಡೆಯ ಬಗ್ಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕೇಸ್ ಬಗ್ಗೆ ತನಿಖೆ ಪೂರ್ಣಗೊಂಡಿದೆ. ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆದರೂ ಪ್ರಕರಣ ಶೀಘ್ರ ಇತ್ಯರ್ಥವಾಗುತ್ತಿಲ್ಲ. ಇಂದು ರಮೇಶ್ ಜಾರಕಿಹೊಳಿ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಎಸ್ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿ ಅವರ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು. ಎಸ್‍ಐಟಿ ಮುಖ್ಯಸ್ಥರು ಮೂರು ತಿಂಗಳು ರಜೆ ಪಡೆದುಕೊಂಡಿದ್ದರು. ಆ ಸಂದರ್ಭದಲ್ಲಿ ಇಡೀ ಪ್ರಕರಣದ ತನಿಖೆ ನಡೆದಿದೆ. ಈ ಬಗ್ಗೆ ಹೈಕೋರ್ಟ್‍ಗೆ ಕೂಡ ಅಂತಿಮ ವರದಿ ಸಲ್ಲಿಕೆ ಮಾಡಿದ್ದಾರೆ. ಆದರೆ ಎಸ್‍ಐಟಿ ಮುಖ್ಯಸ್ಥರ ಗಮನದಲ್ಲಿ ಇಲ್ಲದೇ ತನಿಖೆ ಮುಕ್ತಾಯ ಆಗಿದೆ. ಹಾಗಾದರೆ ಎಸ್‍ಐಟಿ ಮುಖ್ಯಸ್ಥರನ್ನು ನೇಮಕ ಮಾಡೋದು ಯಾಕೆ ಎಂದು ಕೋರ್ಟ್ ಪ್ರಶ್ನೆ ಮಾಡಿದೆ.

Edited By : Nagaraj Tulugeri
PublicNext

PublicNext

12/08/2021 09:15 pm

Cinque Terre

78.94 K

Cinque Terre

6

ಸಂಬಂಧಿತ ಸುದ್ದಿ