ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಣಿವೆ ರಾಜ್ಯದಲ್ಲಿ ಗುಂಡಿನ ಸದ್ದು: ಓರ್ವ ಉಗ್ರನ ಹತ್ಯೆ- ಇಬ್ಬರು ಯೋಧರಿಗೆ ಗಾಯ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಾರತೀಯ ಯೋಧರು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಲ್ಗಾಂ ಜಿಲ್ಲೆಯ ಮಾಲ್ಪೊರಾ ಮಿರ್ ಬಜಾರ್ ಪ್ರದೇಶದಲ್ಲಿ ಹಾದು ಹೋಗುತ್ತಿರುವ ಜಮ್ಮು-ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಸ್‌ಎಫ್ ಬೆಂಗಾವಲು ವಾಹನದ ಮೇಲೆ ಉಗ್ರರು ಗುರುವಾರ ಗುಂಡಿನ ದಾಳಿ ನಡೆಸಿದರು. ತಕ್ಷಣ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಹತ್ತಿರದ ಕಟ್ಟಡದಲ್ಲಿ ಅವಿತುಕೊಂಡರು.

ಈ ಬಗ್ಗೆ ಮಾಹಿತಿ ನೀಡಿದ ಕಾಶ್ಮೀರ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ವಿಜಯ್ ಕುಮಾರ್, "ಲಷ್ಕರ್–ಎ–ತಯಬಾ (ಎಲ್‌ಇಟಿ) ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಅಡಗಿರುವ ಬಗ್ಗೆ ಶಂಕಿಸಲಾಗಿದೆ. ಇದುವರೆಗೆ ಓರ್ವ ಉಗ್ರನನ್ನು ಕೊಲೆಗೈಯಲಾಗಿದೆ. ಕಟ್ಟಡದ ಸಂಪೂರ್ಣ ಶೋಧ ನಡೆಯಬೇಕಿದೆ" ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

13/08/2021 10:31 am

Cinque Terre

46.32 K

Cinque Terre

0

ಸಂಬಂಧಿತ ಸುದ್ದಿ