ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೆಡ್ಡಿ ಕಾರಿಗೆ ಬೆಂಕಿ ಇಟ್ಟ ಕಿರಾತಕರು ಸೆರೆ..

ಬೆಂಗಳೂರು: ಆ. 11 ರಂದು ರಾತ್ರಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ ಐಷಾರಾಮಿ ಕಾರುಗಳಿಗೆ ಬೆಂಕಿ ಇಟ್ಟ ಅರೋಪದ ಮೇಲೆ ಮೂವರು ಆರೋಪಿಗಳನ್ನು ಆಗ್ನೇಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಎರಡು ದಿನದಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರ ಕಾರ್ಯವನ್ನು ಮೆಚ್ಚಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಒಂದು ಲಕ್ಷ ರೂ. ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

ಬಂಧಿತ ಆರೋಪಿ ಸತೀಶ್ ರೆಡ್ಡಿ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದ. ಅದಕ್ಕೆ ಆಸ್ಪದ ಕೊಡದ ಹಿನ್ನೆಲೆಯಲ್ಲಿ ಸಂಚು ರೂಪಿಸಿ ಬೆಂಕಿ ಇಟ್ಟಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ.

ಕೃತ್ಯಕ್ಕಾಗಿ ಬೈಕ್ ವೊಂದನ್ನು ಖದ್ದ ಇವರು ಅದೇ ಬೈಕ್ ಸುಳುವಿನಿಂದ ಸಿಕ್ಕಿಬಿದ್ದಿದ್ದಾರೆ. ಸದ್ಯ ಆರೋಪಿತರನ್ನು ಗಾರ್ವೆಭಾವಿ ಪಾಳ್ಯದ ಸಾಗರ್ (19), ಬೇಗೂರು ನಿವಾಸಿ ಶ್ರೀಧರ್ (20), ಬಂಡೆಪಾಳ್ಯದ ನಿವಾಸಿ ನವೀನ್ ( 22) ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಬಂಧಿತರಲ್ಲಿ ಓರ್ವ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವಾಗ ಕಾಲಿಗೆ ಗಾಯ ಮಾಡಿಕೊಂಡಿದ್ದಾನೆ. ಕುಂಟುತ್ತಾ ಓಡಿ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

Edited By : Nirmala Aralikatti
PublicNext

PublicNext

14/08/2021 04:11 pm

Cinque Terre

61.42 K

Cinque Terre

3

ಸಂಬಂಧಿತ ಸುದ್ದಿ