ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಮೈಸೂರು ಗ್ಯಾಂಗ್ ರೇಪ್ : ಆರೋಪಿಗಳ ಮಾಹಿತಿ ನೀಡಿದ ಡಿಜಿ ಐಜಿಪಿ ಪ್ರವೀಣ್ ಸೂದ್

ಮೈಸೂರು : ಮೈಸೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಓರ್ವ ಬಾಲಾಪರಾಧಿ ಸೇರಿ ಐವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ಡಿಜಿ ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದರು.

ಮೈಸೂರಿನಲ್ಲಿ ಡಿಜಿ ಐಜಿಪಿ ಪ್ರವೀಣ್ ಸೂದ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಆರೋಪಿಗಳು ಎಲ್ಲರೂ ತಮಿಳುನಾಡಿನ ತಿರುಪುರ್ ದವರು, ಅವರೆಲ್ಲಾ ಕೂಲಿ ಕಾರ್ಮಿಕರಾಗಿದ್ದಾರೆ. ಪ್ರಕರಣದಲ್ಲಿ ಒಟ್ಟು ಆರು ಮಂದಿ ಆರೋಪಿಗಳಿದ್ದು, ಇದುವರೆಗೆ ಐವರನ್ನು ಬಂಧಿಸಲಾಗಿದೆ. ಬಂಧಿತ ಐವರಲ್ಲಿ ಒಬ್ಬರು ಬಾಲಾಪರಾಧಿಯಾಗಿದ್ದು, ಆತ 17 ವರ್ಷದವನು ಎಂದು ಪ್ರವೀಣ್ ಸೂದ್ ಹೇಳಿದರು.

ಸಂತ್ರಸ್ತೆಯಿಂದ ಒಂದು ಶಬ್ಧವೂ ಮಾಹಿತಿ ಸಿಕ್ಕಿಲ್ಲ. ಇದು ಈ ಪ್ರಕರಣದ ವಿಶೇಷ. ಆಕೆಯ ಸ್ನೇಹಿತ ಕೆಲವು ಮಾಹಿತಿ ನೀಡಿದರು. ಅದೂ ಅಪೂರ್ಣ. ತಂತ್ರಜ್ಞಾನವನ್ನು ಬಳಸಿ ಈ ಪ್ರಕರಣದ ತನಿಖೆ ನಡೆಸಲಾಗಿದೆ ಎಂದರು.

Edited By : Nirmala Aralikatti
PublicNext

PublicNext

28/08/2021 12:41 pm

Cinque Terre

78.9 K

Cinque Terre

7