ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು ಗ್ಯಾಂಗ್ ರೇಪ್ ಕೇಸ್ : 6ನೇ ಆರೋಪಿ ಅರೆಸ್ಟ್,ಇನ್ನೊಬ್ಬನಿಗಾಗಿ ಹುಡುಕಾಟ

ಮೈಸೂರು: ಮೈಸೂರಿನ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಆರನೇ ಆರೋಪಿಯನ್ನು ಅರೆಸ್ಟ್ ಮಾಡಲಾಗಿದ್ದು 7 ನೇ ಆರೋಪಿ ಹುಡುಕಾಟ ಮುಂದುವರೆದಿದೆ.

ಈಗಾಗಲೇ ಮೈಸೂರು ಹಾಗೂ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳು ನಾಡಿದ ತಿರುಪುರ್ ಮೂಲದ 5 ಮಂದಿ ಕೂಲಿ ಕಾರ್ಮಿಕರನ್ನು ಬಂಧಿಸಿದ್ದರು. ಇದೀಗ ಆರನೇ ಆರೋಪಿ ತಮಿಳು ನಾಡಿನಲ್ಲಿ ಸಿಕ್ಕಿಬಿದ್ದಿದ್ದಾನೆ.

ಒಟ್ಟು ಏಳು ಮಂದಿ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದು ಇನ್ನೊಬ್ಬನ ಹುಡುಕಾಟ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

31/08/2021 10:00 am

Cinque Terre

64.52 K

Cinque Terre

0