ಮೈಸೂರು: ನಗರದ ಹೊರವಲಯದಲ್ಲಿ 28 ದಿನಗಳ ಹಿಂದೆ ನಡೆದ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆ ಕೊನೆಗೂ ತನ್ನ ಹೇಳಿಕೆ ನೀಡಿದ್ದಾರೆ. ಪೊಲೀಸರ ಮನವೊಲಿಕೆಗೆ ಒಪ್ಪಿದ ಇಂದು ಮುಂಬೈನಿಂದ ಮೈಸೂರಿಗೆ ಬಂದ ಸಂತ್ರಸ್ತೆ, ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಲಿಖಿತ ಹೇಳಿಕೆ ದಾಖಲಿಸಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರಾದ ಸಂತ್ರಸ್ತೆ, ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ಸುದೀರ್ಘ ಎರಡು ಗಂಟೆಗಳ ಕಾಲ ತಮ್ಮ ಹೇಳಿಕೆಯನ್ನು ಲಿಖಿತ ರೂಪದಲ್ಲಿ ನೀಡಿದ್ದಾರೆ. ಆ ದಿನ ಏನಾಯ್ತು? ಯಾರು ರಕ್ಷಣೆ ನೀಡಿದ್ರು? ಮಾನಸಿಕವಾಗಿ ಅನುಭವಿಸಿದ ಯಾತನೆ. ಹೀಗೆ ಎಲ್ಲವನ್ನು ಎಳೆಎಳೆಯಾಗಿ ವಿವರಿಸಿದ್ದಾರೆ ಎನ್ನಲಾಗಿದೆ.
PublicNext
22/09/2021 10:54 pm