ಕೋಲ್ಕತ್ತಾ: ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬಂಧಿಸಲಾಗಿರುವ ವ್ಯಕ್ತಿಯನ್ನು ಬಿಡುಗಡೆಗೊಳಿಸುವ ಮೂಲಕ ಕೋಲ್ಕತ್ತಾ ಹೈಕೋರ್ಟ್ ಮಹತ್ವದ ಮಹತ್ವದ ತೀರ್ಪು ನೀಡಿದೆ. ಲೈಂಗಿಕ ಕ್ರಿಯೆಯಲ್ಲಿ ಸ್ವಯಂಪ್ರೇರಣೆಯಿಂದ ಭಾಗವಹಿಸಿದ 16 ವರ್ಷದ ಹುಡುಗಿಯು ಅದರ ಪರಿಣಾಮಗಳ ಬಗ್ಗೆ ತಿಳಿಯದಷ್ಟು ಚಿಕ್ಕವಳಲ್ಲ ಎಂದು ನ್ಯಾಯಾಲಯ ಗಮನಿಸಿದೆ.
ಮಕ್ಕಳ ಸುರಕ್ಷತೆಗಾಗಿ, ಪೋಕ್ಸೊ ಕಾಯಿದೆಯ ನಿಬಂಧನೆಗಳನ್ನು ಸೂಕ್ತವಾಗಿ ಪಾಲಿಸಬೇಕು. ಇದು ಒಬ್ಬ ವ್ಯಕ್ತಿಯನ್ನು ಮದುವೆಯಾಗಲು ಒತ್ತಾಯಿಸುವುದಕ್ಕಾಗಿ ಇಂತಹ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ನ್ಯಾಯಾಲಯವು ಹೇಳಿದೆ.
ಪ್ರಕರಣದಲ್ಲಿ ಬಂಧಿಸಲಾಗಿದ್ದ 22 ವರ್ಷ ವಯಸ್ಸಿನ ಯುವಕನು 16 ವರ್ಷದ ಹುಡುಗಿಯ ಜೊತೆ ಒಮ್ಮತದ ಲೈಂಗಿಕ ಕ್ರಿಯೆ ನಡೆಸಿದ್ದ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (1) ರ ಅಡಿಯಲ್ಲಿ ಮತ್ತು ಪೋಕ್ಸೊ ಕಾಯಿದೆಯ ಸೆಕ್ಷನ್ 4 ರ ಅಡಿಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಬ್ಬರು ಒಮ್ಮತದಿಂದ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಈತ ಕೋಲ್ಕತ್ತಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್ ಇದೀಗ ಪ್ರಕರಣದಲ್ಲಿ ಯುವಕನನ್ನು ಖುಲಾಸೆಗೊಳಿಸಿದೆ.
PublicNext
24/09/2021 10:27 am