ನವದೆಹಲಿ: ಉತ್ತರ ಪ್ರದೇಶದ ಲಿಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಎಷ್ಟು ಜನರನ್ನು ಬಂಧಿಸಿದ್ದೀರಿ? ಎಂದು ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದೆ.
ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಶ್ನೆ ಮಾಡಿದ ಸುಪ್ರೀಂ ಕೋರ್ಟ್, ಘಟನೆಗೆ ಸಂಬಂಧಿಸಿದಂತೆ ನಾಳೆ ವರದಿ ಸಲ್ಲಿಸುವಂತೆ ಆದೇಶ ನೀಡಿದೆ. ಲಿಖಿಂಪುರ ಖೇರಿ ಘಟನೆ ಕುರಿತಾಗಿ ಕ್ರಮ ಕೈಗೊಳ್ಳಲು ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡುವಂತೆ ಮನವಿ ಮಾಡಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿತ್ತು.
ಕಳೆದ ಭಾನುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಲಿಖಿಂಪುರ್ ಖೇರಿಗೆ ಭೇಟಿ ನೀಡಿದ್ದರು ಈ ವೇಳೆ ಪ್ರತಿಭಟನಾ ನಿರತ ರೈತರ ಮೇಲೆ ಎಸ್ ಯು ವಿ ಕಾರು ಹಾಯಿಸಿದ ದುಷ್ಕರ್ಮಿಗಳು 8 ಮಂದಿಯ ಸಾವಿಗೆ ಕಾರಣವಾಗಿದ್ದರು.
PublicNext
07/10/2021 07:01 pm