ನವದೆಹಲಿ: ರಣಜಿತ್ ಸಿಂಗ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಕುಲಾ ವಿಶೇಷ ಸಿಬಿಐ ನ್ಯಾಯಾಲಯ ಇಂದು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಡೇರಾದ ಪ್ರಭಾವಿ 10 ಸದಸ್ಯರ ಸಮಿತಿ ಸದಸ್ಯ ರಣಜಿತ್ ಸಿಂಗ್ ಅವರನ್ನು ಜುಲೈ 10, 2002 ರಂದು ನಾಲ್ವರು ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಗುರ್ಮೀತ್ ರಾಮ್ ರಹೀಮ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.
ಗುರ್ಮಿತ್ ತನ್ನ ಇಬ್ಬರು ಮಹಿಳಾ ಶಿಷ್ಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಮಾತ್ರವಲ್ಲ ಪತ್ರಕರ್ತ ರಾಮ್ ಚಂದರ್ ಛತರ್ಪತಿ ಹತ್ಯೆಗಾಗಿ ಜೀವಾವಧಿ ಶಿಕ್ಷೆಯನ್ನೂ ವಿಧಿಸಲಾಗಿತ್ತು. ಪ್ರಸಕ್ತ ಅವರು ಡೇರಾದ ಅನುಯಾಯಿಗಳ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಎದುರಿಸುತ್ತಿದ್ದರು.
PublicNext
18/10/2021 05:02 pm