ಮಂಗಳೂರು: ಇಂಟರ್ನ್‌ಶಿಪ್ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಖ್ಯಾತ ವಕೀಲ ಕೆ .ಎಸ್.ಎನ್.ರಾಜೇಶ್ ಭಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಸಂತ್ರಸ್ತ ವಿದ್ಯಾರ್ಥಿನಿಯು ವಕೀಲರ ವಿರುದ್ಧ ನಿನ್ನೆ ರಾತ್ರಿ ನೀಡಿದ ದೂರಿನ ಮೇರೆಗೆ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ವಕೀಲ ರಾಜೇಶ್ ಭಟ್ ನಾಪತ್ತೆಯಾಗಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಎಲ್ ಎಲ್ ಬಿ ವಿದ್ಯಾರ್ಥಿನಿ ಇಂಟರ್ನ್ ಶಿಪ್ ಗೆ ರಾಜೇಶ್ ಭಟ್ ಬಳಿ ಬರುತ್ತಿದ್ದರು. ಇವರು ಎಸಿಬಿ, ಲೋಕಾಯುಕ್ತಕ್ಕೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಹಾಗೂ ನಗರದ ಪ್ರಸಿದ್ಧ ಬ್ಯಾಂಕ್ ಗಳು ಸೇರಿ ಹಲವು ಕಂಪನಿಗಳಿಗೆ ಲೀಗಲ್ ಅಡ್ವೈಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದ್ಯಮದೊಂದಿಗೆ ಮಾತನಾಡಿದ ಎನ್ ಶಶಿಕುಮಾರ್ ಸಂತ್ರಸ್ತೆ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದಿದ್ದಾರೆ.
ಇನ್ನು ಸಂತ್ರಸ್ತೆ ಹಾಗೂ ವಕೀಲರ ನಡುವೆ ನಡೆದ ಫೋನ್ ಸಂಭಾಷಣೆಯೆಂದು ಹೇಳಲಾದ 11 ನಿಮಿಷ 55 ಸೆಕೆಂಡ್ಸ್ ಇರುವ ಆಡಿಯೋ ಒಂದು ವೈರಲ್ ಆಗಿದೆ.ವಕೀಲ ರಾಜೇಶ್ ಭಟ್ ವಿರುದ್ಧ ಐಪಿಸಿ ಸೆಕ್ಷನ್ 354 ( A ) , 354 ( B ) , 354 ( C ) , 376 , 511 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
PublicNext
19/10/2021 10:39 am