ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಂಗ್ಲಾದಲ್ಲಿ ಹಿಂಸಾಚಾರ 450 ಮಂದಿ ಅರೆಸ್ಟ್

ಢಾಕಾ: ಬಾಂಗ್ಲಾದೇಶದ ಹಲವೆಡೆ ಹಿಂದೂಗಳ ಮೇಲೆ ದಾಳಿ ನಡೆದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಈವರೆಗೆ ಬರೋಬ್ಬರಿ 450 ಮಂದಿಯನ್ನು ಬಂಧಿಸಿರುವುದಾಗಿ ಬಾಂಗ್ಲಾದೇಶ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ಮೇಲಿನ ದಾಳಿಗೆ ಸಂಬಂಧಪಟ್ಟಂತೆ 71 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. 450 ಶಂಕಿತರನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖಾ ವಕ್ತಾರರು ತಿಳಿಸಿದ್ದಾರೆ.

ಇದೇ ವೇಳೆ ಧರ್ಮವನ್ನು ಬಳಸಿಕೊಂಡು ಹಿಂಸಾಚಾರಕ್ಕೆ ಪ್ರಚೋದಿಸುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಎಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರು ಗೃಹ ಸಚಿವರಿಗೆ ಸೂಚನೆ ನೀಡಿದ್ದಾರೆ.

ಬಾಂಗ್ಲಾದೇಶವು ಇತ್ತೀಚೆಗೆ ಮೂಲಭೂತ ಹಾಗೂ ಜಿಹಾದಿಗಳ ರಾಷ್ಟ್ರವಾಗಿ ಬದಲಾಗುತ್ತಿದೆ ಎಂದು ಆ ದೇಶದ ವಿವಾದಿತ ಲೇಖಕಿ ತಸ್ಲಿಮಾ ಬೇಸರ ವ್ಯಕ್ತಪಡಿಸಿದ್ದಾರೆ. ಬಾಂಗ್ಲಾದೇಶದಲ್ಲಿನ ಮದರಸಾಗಳಲ್ಲಿ ಮಕ್ಕಳಿಗೆ ಇಸ್ಲಾಂ ಮೂಲಭೂತವಾದವನ್ನು ಬೋಧಿಸಲಾಗುತ್ತಿದೆ. ಇನ್ನು, ಪ್ರಧಾನಿ ಶೇಖ್ ಹಸೀನಾ ಅವರು ಧರ್ಮ ರಾಜಕಾರಣಕ್ಕೆ ಮುಂದಾಗಿರುವುದರಿಂದ ಅಲ್ಲಿನ ವಾತಾವರಣ ಜಿಹಾದಿಗಳ ಪರವಾಗಿ ಬದಲಾಗುತ್ತಿದೆ ಎಂದಿದ್ದಾರೆ.

Edited By : Nirmala Aralikatti
PublicNext

PublicNext

19/10/2021 09:59 pm

Cinque Terre

80.45 K

Cinque Terre

10

ಸಂಬಂಧಿತ ಸುದ್ದಿ