ಬೆಂಗಳೂರು: ಡ್ರಗ್ಸ್, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತನಾಗಿದ್ದ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೋಡಿಯೇರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಕಳೆದೊಂದು ವರ್ಷದಿಂದ ಸೆರೆಮನೆಯಲ್ಲಿದ್ದ ಬಿನೀಶ್‌ಗೆ ಕರ್ನಾಟಕ ಹೈಕೋರ್ಟ್ ಗುರುವಾರ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ. 50 ಲಕ್ಷ ರೂಪಾಯಿಗೂ ಅಧಿಕ ಮೊತ್ತದ ಹಣವನ್ನು ಮಾದಕ ದ್ರವ್ಯ ದಂಧೆ ನಡೆಸುತ್ತಿದ್ದ ಆರೋಪಿಗೆ ವರ್ಗಾವಣೆ ಮಾಡಿದ್ದಕ್ಕಾಗಿ ಇಡಿ ಬಂಧಿಸಿದ ಒಂದು ವರ್ಷದ ನಂತರ ಬಿನೀಶ್‌ಗೆ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಂಜಿ ಉಮಾ ಅವರ ಏಕ ಪೀಠವು ಅನುಮತಿಸಿದೆ.
2020ರ ಅಕ್ಟೋಬರ್ 29ರಂದು ಬಂಧಿಸಲ್ಪಟ್ಟಾಗಿನಿಂದ ಬಿನೀಶ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಆರೋಪ ಹೊರಿಸಲಾಗಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧನದಲ್ಲಿಡಲಾಗಿತ್ತು. ಅವರ ತಂದೆ ಕೊಡಿಯೇರಿ ಬಾಲಕೃಷ್ಣನ್, ಭಾರತದಲ್ಲಿ ಸಿಪಿಎಂನ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯ ಸದಸ್ಯರಾಗಿದ್ದಾರೆ ಮತ್ತು ನವೆಂಬರ್, 2020 ರವರೆಗೆ ಕೇರಳದಲ್ಲಿ ಸಿಪಿಎಂನ ರಾಜ್ಯ ಕಾರ್ಯದರ್ಶಿಯಾಗಿದ್ದರು.
PublicNext
28/10/2021 08:08 pm