ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಚರ್ಮದಿಂದ ಚರ್ಮ ಸ್ಪರ್ಶವಿಲ್ಲದಿದ್ರೆ ಲೈಂಗಿಕ ದೌರ್ಜನ್ಯವಲ್ಲ': ಸುಪ್ರೀಂನಿಂದ ಬಾಂಬೆ ಹೈಕೋರ್ಟ್​ ತೀರ್ಪು ರದ್ದು

ನವದೆಹಲಿ: 'ಇಬ್ಬರ ಮಧ್ಯೆ ಚರ್ಮದಿಂದ ಚರ್ಮ ಸ್ಪರ್ಶವಾಗದಿದ್ದರೆ ಅದು ಲೈಂಗಿಕ ದೌರ್ಜನ್ಯ ಆಗುವುದಿಲ್ಲ' ಎಂದು ಬಾಂಬೆ ಹೈಕೋರ್ಟ್ ನೀಡಿದ್ದ ವಿವಾದಾತ್ಮಕ ತೀರ್ಪನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ.

ಹೌದು. ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್, ನ್ಯಾ. ಎಸ್ ರವೀಂದ್ರ ಭಟ್ ಮತ್ತು ನ್ಯಾ. ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ನ್ಯಾಯಪೀಠವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಏನಿದು ಪ್ರಕರಣ:

ಲೈಂಗಿಕ ದೌರ್ಜನ್ಯ ಪ್ರಕರಣವೊಂದರ ಕುರಿತು ಕಳೆದ ಜನವರಿ 19ರಂದು ವಿಚಾರಣೆ ನಡೆಸಿದ್ದ ಬಾಂಬೆ ಹೈಕೋರ್ಟ್​ನ ನಾಗ್ಪುರ ಪೀಠ​ವು, 'ಒಬ್ಬ ಅಪ್ರಾಪ್ತೆ ಬಟ್ಟೆ ಧರಿಸಿಕೊಂಡಿದ್ದಾಗ ಆಕೆಯ ಎದೆಯನ್ನು ಯಾರಾದರೂ ಮುಟ್ಟಿದರೆ ಅಥವಾ ಅವರ ಕೈ ಎದೆಗೆ ತಾಗಿದ ತಕ್ಷಣ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆತ ಅಪ್ರಾಪ್ತೆ ಧರಿಸಿದ್ದ ಬಟ್ಟೆಯನ್ನು ತೆಗೆದು ಸ್ಪರ್ಶಿಸಿದರೆ ಅಥವಾ ಬಟ್ಟೆಯೊಳಗಿಂದ ಕೈ ಹಾಕಿದರೆ ಅದನ್ನು ಲೈಂಗಿಕ ದೌರ್ಜನ್ಯ ಎನ್ನಬಹುದು' ಎಂದು ತೀರ್ಪು ನೀಡಿ ಆರೋಪಿಯನ್ನು ದೋಷಮುಕ್ತಗೊಳಿಸಿತ್ತು.

ಈ ತೀರ್ಪಿನ ವಿರುದ್ಧ ಭಾರತದ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಮಹಾರಾಷ್ಟ್ರ ರಾಜ್ಯವು ಹೈಕೋರ್ಟ್ ಸುಪ್ರೀಂಕೋರ್ಟ್​ಗೆ ಮೇಲ್ಮನವಿಗಳನ್ನು ಸಲ್ಲಿಸಿದ್ದವು. ಬಳಿಕ ಬಾಂಬೆ ಹೈಕೋರ್ಟ್​ ತೀರ್ಪನ್ನು ಸುಪ್ರೀಂಕೋರ್ಟ್​ ತಡೆಹಿಡಿದಿತ್ತು.

Edited By : Vijay Kumar
PublicNext

PublicNext

18/11/2021 01:43 pm

Cinque Terre

44.33 K

Cinque Terre

0