ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಐಸಿಸ್ ಮ್ಯಾಗಜೀನ್​ನಲ್ಲಿ ರುಂಡವಿಲ್ಲದ ಈಶ್ವರ ವಿಗ್ರಹ.!- ಮುರುಡೇಶ್ವರನ ಮೇಲೆ ದಾಳಿಗೆ ಸಂಚು?

ಕಾರವಾರ: ಕರ್ನಾಟಕದ ಪ್ರಸಿದ್ಧ ಯಾತ್ರಾ ತಾಣಗಳಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿ ಸಂಚೇ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.

ಈ ಬಗ್ಗೆ ಕರ್ನಾಟಕ ಮತ್ತು ಕೇಂದ್ರ ಸರ್ಕಾರಗಳು ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂಬ ಫೇಸ್‌ಬುಕ್ ಹಾಗೂ ಟ್ವಿಟರ್‌ನ ಬರಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಹೌದು.. ಐಸಿಸ್ ನ ಮ್ಯಾಗಜೀನ್ ಆಗಿರುವ 'ದಿ ವೈಸ್ ಆಫ್ ಹಿಂದ್'ನ ಕವರ್ ಪೇಜ್‌ಗೆ ಮುರ್ಡೇಶ್ವರದ ಶಿವನ ವಿಗ್ರಹದ ಶಿರವನ್ನು ಕತ್ತರಿಸಿದಂತೆ ಪೋಟೋ ಎಡಿಟ್ ಮಾಡಿ ಹಾಕಲಾಗಿದೆ. ಅದರ ಮೇಲೆ 'Its time to Break False Gods' ಎಂಬ ಅಡಿಬರಹವನ್ನೂ ಮುದ್ರಿಸಲಾಗಿದೆ. ಶಿವನ ಪ್ರತಿಮೆಯ ರುಂಡವನ್ನು ಕತ್ತರಿಸಿ, ಅದರ ತುತ್ತ ತುದಿಗೆ ಐಸಿಸ್ ಧ್ವಜ ಹಾರಾಡುತ್ತಿರುವಂತೆ ವಿಕೃತಗೊಳಿಸಿದ ಚಿತ್ರವನ್ನು ಬಳಸಿಕೊಳ್ಳಲಾಗಿದೆ. ಈ ಪೋಟೋ ಮತ್ತು ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Edited By : Vijay Kumar
PublicNext

PublicNext

23/11/2021 01:57 pm

Cinque Terre

31.7 K

Cinque Terre

8

ಸಂಬಂಧಿತ ಸುದ್ದಿ