ಬಾಗೇಪಲ್ಲಿ: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಠಾಣೆಯ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ರತ್ನಯ್ಯ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.
ಜನರಿಗೆ ಬೆದರಿಕೆ ಹಾಕಿ ಹಣಕ್ಕಾಗಿ ಪೀಡಿಸುತ್ತಿದ್ದ ಪಿಎಸ್ ಐ ರತ್ನಯ್ಯ ನಿಂದ ಜನ ಬೇಸತ್ತು ಹೋಗಿದ್ದರು. ಇವರು ನಾಲ್ಕೈದು ಕಡೆ ಲಂಚಕ್ಕಾಗಿ ಜನರನ್ನು ಪೀಡಿಸಿದ್ದ ಸಂದರ್ಭದಲ್ಲಿ ಸಂತ್ರಸ್ತರು ಆಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.
ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ರತ್ನಯ್ಯನನ್ನು ಕೆಲಸದಿಂದ ಅಮಾನತು ಮಾಡಿ ಆದೇಶಿಸಿದ್ದಾರೆ.
PublicNext
30/11/2021 03:11 pm