ನವದೆಹಲಿ: 2017ರಲ್ಲಿ ಸುಪ್ರೀಂ ಕೋರ್ಟ್ ಮಲ್ಯ ಅವರನ್ನು ಅಪರಾಧಿ ಎಂದು ಘೋಷಿಸಿತ್ತು. ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ವಂಚಿಸಿದ ನಂತರ ಮಲ್ಯ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ.
ಸುಪ್ರೀಂಕೋರ್ಟ್ ನಲ್ಲಿ ಮಂಗಳವಾರ ವಿಜಯ್ ಮಲ್ಯ ನ್ಯಾಯಾಂಗ ನಿಂದನ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಮಲ್ಯ ಅವರಿಗಿದ್ದ ಎಲ್ಲ ಮೇಲ್ಮನವಿ ಸಲ್ಲಿಸುವ ಎಲ್ಲ ಮಾರ್ಗಗಳು ಈಗಾಗಲೇ ಮುಗಿದಿದೆ. ಆದರೂ ಕೆಲವು ‘ಗೌಪ್ಯ ಪ್ರಕ್ರಿಯೆಗಳು’ ಬಾಕಿ ಉಳಿದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿತು.
ಅವರನ್ನು ಭಾರತಕ್ಕೆ ಹಸ್ತಾಂತರಿಸುವವರೆಗೆ ನಾವು ಇನ್ನು ಮುಂದೆ ಕಾಯಲು ಸಾಧ್ಯವಿಲ್ಲ, ಎಂದು ಹೇಳಿದ ನ್ಯಾಯಾಲಯ ಮುಂದಿನ ಕೊನೆಯ ವಿಚಾರಣೆಯನ್ನು ಜನವರಿ 18ಕ್ಕೆ ಮುಂದೂಡಲಾಗುವುದು. ಶಿಕ್ಷೆ ವಿಧಿಸಲು ನಾವು ಸಿದ್ಧ ಎಂದು ತಿಳಿಸಿತು. ಈ ವೇಳೆ ಮಲ್ಯ ಹಾಜರಾಗದೇ ಇದ್ದರೂ ವಿಚಾರಣೆ ನಡೆಯುತ್ತದೆ ಎಂದು ಹೇಳಿದೆ.
PublicNext
01/12/2021 12:04 pm