ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೌರಿ ಲಂಕೇಶ ಹಂತಕರು ಹುಬ್ಬಳ್ಳಿ ನ್ಯಾಯಾಲಯಕ್ಕೆ ಹಾಜರು

ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬೈಕ್ ಕಳ್ಳತನ ಆರೋಪದ ವಿಚಾರಣೆಗಾಗಿ ಪೊಲೀಸರು ಹುಬ್ಬಳ್ಳಿ 1ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಮುಂಬೈ ಜೈಲಿನಿಂದ ಬಾಡಿ ವಾರಂಟ್ ಮೇಲೆ ಹುಬ್ಬಳ್ಳಿಗೆ ಕರೆ ತಂದಿದ್ದ ಗ್ರಾಮೀಣ ಠಾಣೆ ಪೊಲೀಸರು, ವಿಚಾರಣೆ ಮುಗಿದ ನಂತರ ಬೈಕ್ ಮಹಜರು ನಡೆಸಲು ಠಾಣೆಗೆ ಕರೆದೊಯ್ದರು.

ಗೌರಿ ಹತ್ಯೆ ಪ್ರಕರಣದಲ್ಲಿ ಬೈಕ್ ನ್ನು ಬಳಸಲಾಗಿತ್ತು. ಆ ಬೈಕನ್ನು ಹುಬ್ಬಳ್ಳಿ ತಾಲೂಕಿನ ಮಾವನೂರಲ್ಲಿ ಕಳ್ಳತನ ಮಾಡಲಾಗಿತ್ತು. ಈ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು.

Edited By : Vijay Kumar
PublicNext

PublicNext

01/12/2021 03:42 pm

Cinque Terre

35.16 K

Cinque Terre

0

ಸಂಬಂಧಿತ ಸುದ್ದಿ